ರಾಷ್ಟ್ರೀಯ ಸುದ್ದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಉಮಾ ಭಾರತಿ, ಜೋಶಿ ಸೇರಿ ಎಲ್ಲಾ ಆರೋಪಿಗಳಿಗೆ ಖುಲಾಸೆ

ವರದಿಗಾರ (ಸೆ.30): ಇಪ್ಪತ್ತೇಳು ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದ್ದು, ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

ಸಿಬಿಐ ನ್ಯಾಯಾಲಯ ನೀಡಿರುವ ಇಂದಿನ ತೀರ್ಪಿನಲ್ಲಿ ಎಲ್ಲ 32 ಮಂದಿಗೂ ಕ್ಲೀನ್ ಚಿಟ್ ಕೊಡಲಾಗಿದೆ. ಇದು ಉದ್ದೇಶಪೂರ್ವಕ ಕೃತ್ಯವಲ್ಲ, ಆಕಸ್ಮಿಕವಾಗಿ ನಡೆದ ಘಟನೆ ಎಂದು ನ್ಯಾಯಾಲಯ ಹೇಳಿದೆ.

ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ ಎಲ್ಲ 32 ಮಂದಿ ಆರೋಪಿಗಳು ಖುಲಾಸೆಗೊಂಡಿದ್ದಾರೆ. 1992ರ ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿ 16ನೇ ಶತಮಾನದ ಕಟ್ಟಡ ನೆಲಸಮವಾದ ಸುಮಾರು ಮೂರು ದಶಕಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ನ್ಯಾಯಾಲಯ ಪ್ರಕಟಿಸಿದೆ.
49 ಆರೋಪಿಗಳ ಪೈಕಿ 32 ಮಂದಿ ಇಂದು ಜೀವಂತವಾಗಿದ್ದಾರೆ. ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವ್ಯಾಪಕ ಬಿಗಿಭದ್ರತೆ ಮಾಡಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group