ವರದಿಗಾರ (ಸೆ.30): ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಮಥುರಾದಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಫೂರ್ತಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದು ರಾಷ್ಟ್ರೀಯವಾದಿಗಳಿಗೆ ಸಂತಸದ ದಿನ. ಸ್ವತಂತ್ರ್ಯ ಭಾರತದಲ್ಲಿ ನಮ್ಮದೇ ನೆಲದ ಶ್ರದ್ಧಾ ಕೇಂದ್ರಗಳ ಸಂರಕ್ಷಣೆಯ ಹೋರಾಟಕ್ಕೆ ಸಿಕ್ಕ ಗೆಲುವು. ಈ ತೀರ್ಪು ಅಯೋಧ್ಯೆಗಷ್ಟೇ ಸೀಮಿತವಲ್ಲ. ಮಥುರಾದಲ್ಲಿಯೂ ಕೃಷ್ಣನ ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ. ಕೃಷ್ಣ ದೇವಾಲಯ ಪುನರ್ ನಿರ್ಮಾಣಕ್ಕೆ ಈ ತೀರ್ಪು ಪ್ರೇರಣೆಯಾಗಿದೆ ಎಂದು ಅಡ್ವಾಣಿ ಅವರಿಗೆ ಶಿಕ್ಷೆಯಾಗಿದ್ದರೆ ಈ ವಯಸ್ಸಿನಲ್ಲಿ ಏನು ಕಥೆ? ಎಂದು ಕೆಲವರು ಹೇಳುತ್ತಿದ್ದರು. ಆದರೆ ಅವರು ರಾಮನಿಗಾಗಿ ಶಿಕ್ಷೆ ಅನುಭವಿಸಲು ಸಿದ್ಧರಾಗಿದ್ದರು ಎಂದು ಈಶ್ವರಪ್ಪ ಮಥುರಾದಲ್ಲಿಯೂ ಕರಸೇವೆ ಮಾಡಲಾಗುವುದಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಥುರಾದಲ್ಲಿ ಕರಸೇವೆ ಮಾಡಲು ಕೋರ್ಟ್ ಬಿಡುವುದಿಲ್ಲ ಎಂಬ ವಿಶ್ವಾಸ ತಮಗಿದೆ ಎಂದರು.
