ರಾಜ್ಯ ಸುದ್ದಿ

“ಬೆಂಗಳೂರು ಉಗ್ರರ ತಾಣ” ಎಂಬ ಹೇಳಿಕೆಗೆ ಈಗಲೂ ಬದ್ಧ: ತೇಜಸ್ವಿ ಸೂರ್ಯ

ವರದಿಗಾರ (ಸೆ.30): “ಬೆಂಗಳೂರು ಉಗ್ರರ ತಾಣ” ಎಂಬ ಹೇಳಿಕೆಗೆ ಈಗಲೂ ಬದ್ಧ ಎಂದು ಬಿಜೆಪಿ ಯುವಮೋರ್ಚಾ ನೂತನ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯನ್ನು ಪ್ರಸ್ತಾಪಿಸಿದ ಅವರು, ಪಿಎಫ್‌ಐ ಗೂಂಡಾಗಿರಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ಅದೇ ಕಾರಣಕ್ಕೆ ಅವರನ್ನು ಬೆಂಬಲಿಸುತ್ತಿದ್ದ ಕಾಂಗ್ರೆಸ್‌ನವರು ಕ್ಷಮೆ ಕೇಳಬೇಕು.

ಬೆಂಗಳೂರಿನ ಸುರಕ್ಷತೆಗೆ ಎನ್‌ಐಎ ಬೇಕು. ಆದರೆ, ಎನ್‌ಐಎ ಬರುವುದರಿಂದ ಎಸ್‌ಡಿಪಿಐ- ಕಾಂಗ್ರೆಸ್ ನಡುವಿನ ಮ್ಯಾಚ್ ಫಿಕ್ಸಿಂಗ್ ಹಾಳಾಗುತ್ತದೆ. ಅದನ್ನು ತಪ್ಪಿಸಲು ಮನಸ್ಸಿಲ್ಲದ ಕಾರಣ ಕಾಂಗ್ರೆಸ್ ಮುಖಂಡರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group