ರಾಷ್ಟ್ರೀಯ ಸುದ್ದಿ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮತ್ತೋರ್ವ ದಲಿತ ಯುವತಿಯ ಅತ್ಯಾಚಾರ; ಸಾವು

ವರದಿಗಾರ (ಅ.1): ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದ ಬಲರಾಂಪುರದಲ್ಲಿ 22 ವರ್ಷದ ದಲಿತ ಯುವತಿ, ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅತ್ಯಾಚಾರವೆಸಗಿದ ಬಳಿಕ ಆರೋಪಿಗಳು ಯುವತಿಯನ್ನು ವೈದ್ಯರಲ್ಲಿಗೆ ಕರೆದೊಯ್ದಿದ್ದಾರೆ. ಆದರೆ ಆಕೆಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಬಳಿಕ ಮತ್ತೆ ಆಕೆಯನ್ನು ಮನೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಶಾಹಿದ್ ಮತ್ತು ಸಾಹಿಲ್ ಎಂಬಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗೆಳೆತನದ ಸೋಗಿನಲ್ಲಿ ಆಕೆಯನ್ನು ಅವರಿಬ್ಬರು ಕರೆಸಿಕೊಂಡು ಅತ್ಯಾಚಾರವೆಸಗಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಯುವತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮಂಗಳವಾರ, ರಾತ್ರಿಯಾದರೂ ಮನೆಗೆ ಬಂದಿಲ್ಲ. ಮೊಬೈಲ್ ಗೆ ಕರೆ ಮಾಡಿದರೂ ಸಿಗುತ್ತಿರಲಿಲ್ಲ. ತಡರಾತ್ರಿ ಯುವತಿ, ಕೈಗೆ ಗ್ಲುಕೋಸ್ ಡ್ರಿಪ್ ಹಾಕಿದ ಸ್ಥಿತಿಯಲ್ಲಿ ಆಟೋ ರಿಕ್ಷಾದಲ್ಲಿ ಮನೆಗೆ ಬಂದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ಯುವತಿಯ ಕುಟುಂಬದವರು ದೂರು ನೀಡಿದ್ದಾರೆ. ಗೈಸ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಲರಾಂಪುರ ಎಸ್.ಪಿ.ದೇವ್ ರಂಜನ್ ವರ್ಮಾ ತಿಳಿಸಿದ್ದಾರೆ.

ಯುವತಿಯ ಕೈ, ಕಾಲು ಮುರಿದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಆದರೆ ಇದನ್ನು ಬಲರಾಂಪುರ ಪೊಲೀಸರು ನಿರಾಕರಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಇಂತಹ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷ ಟೀಕಾಪ್ರಹಾರ ನಡೆಸಿದ್ದು, ಹತ್ರಾಸ್ ಅತ್ಯಾಚಾರ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group