ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಪ್ರತಿದಿನ ಮೂರು ಅತ್ಯಾಚಾರ, 126 ಕಳ್ಳತನ ಪ್ರಕರಣ; ಎನ್ ಸಿಆರ್ ಬಿ ವರದಿ

ವರದಿಗಾರ (ಅ.1): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2019 ರಲ್ಲಿ ಪ್ರತಿದಿನ ಕನಿಷ್ಠ ಮೂರು ಅತ್ಯಾಚಾರ ಪ್ರಕರಣಗಳು ಮತ್ತು 126 ವಾಹನ ಕಳ್ಳತನಗಳು ವರದಿಯಾಗಿವೆ. ಅದರ ಹಿಂದಿನ ವರ್ಷಕ್ಕೆ ಹೋಲಿಸಿದರೆ 2019ರಲ್ಲಿ ಒಟ್ಟಾರೆ ಅಪರಾಧ ಪ್ರಕರಣಗಳ ಸಂಖ್ಯೆ ಶೇಕಡಾ 20ರಷ್ಟು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿಯಲ್ಲಿ ತಿಳಿಸಲಾಗಿದೆ.

ಅದೇ ಅವಧಿಯಲ್ಲಿ ರಾಷ್ಟ್ರೀಯ ಅಪರಾಧ ಪ್ರಮಾಣವು ಶೇಕಡಾ 3 ರಷ್ಟು ಹೆಚ್ಚಾಗಿದೆ.ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಅತಿ ಹೆಚ್ಚಿನ ಕಳ್ಳತನವಾಗಿದೆ. ದೆಹಲಿಯಲ್ಲಿನ 2,99,475 ಅಪರಾಧ ಪ್ರಕರಣಗಳ ಪೈಕಿ ಶೇಕಡಾ 82 ಕ್ಕಿಂತಲೂ ಹೆಚ್ಚು ಕಳ್ಳತನ ಪ್ರಕರಣಗಳಾಗಿವೆ.

ಪ್ರತಿ ವಾರ 24 ಅತ್ಯಾಚಾರ ಪ್ರಕರಣ:

ಹಿಂದಿನ ವರ್ಷಕ್ಕೆ ಹೋಲಿಸಿದರೆ ದೆಹಲಿಯಲ್ಲಿ 2019 ರಲ್ಲಿ ಅತ್ಯಾಚಾರ ಪ್ರಕರಣಗಳು ಶೇ.3ರಷ್ಟು ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳುತ್ತವೆ. ಒಟ್ಟಾರೆಯಾಗಿ, ಮಹಿಳೆಯರ ಮೇಲಿನ ಅಪರಾಧಗಳು 12,521 ರಿಂದ 11,755 ಕ್ಕೆ ಇಳಿದಿದ್ದು, ಶೇಕಡಾ 6ರಷ್ಟು ಕಡಿಮೆಯಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group