ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ; ಕೇವಲ 2 ದಿನಗಳಲ್ಲಿ 18 ಅತ್ಯಾಚಾರ ಪ್ರಕರಣ ದಾಖಲು

ವರದಿಗಾರ (ಅ.1): ಉತ್ತರ ಪ್ರದೇಶದಲ್ಲಿ ಎರಡೇ ದಿನಗಳಲ್ಲಿ 18 ಅತ್ಯಾಚಾರ/ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ನಡೆದಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಪತ್ರಕರ್ತೆ ರೋಹಿಣಿ ಸಿಂಗ್ ಅವರು ದಾಖಲೆ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಯೊಂದಿಗೆ ಟ್ವೀಟ್ ಮಾಡಿದ್ದಾರೆ.

ಮೀರತ್, ಅಯೋಧ್ಯೆ, ಫತೇಪುರ್, ಬಹರೈಚ್, ಬಲರಾಂಪುರ, ಬುಲಂದರ್ ಶಹರ್,ಅಜಂಗಡ, ಕಾನ್ಪುರ, ಲಕ್ನೋ, ಬಾಗ್ಪಟ್, ಸಂತ ಕಬೀರ್ ನಗರದಲ್ಲಿ ತಲಾ ಒಂದು, ಅಮೇಥಿ, 4, ಫತೇಪುರ್ ದಲ್ಲಿ 2 ಅತ್ಯಾಚಾರ ಪ್ರಕರಣಗಳು ನಡೆದಿವೆ.

ಹತ್ರಾಸ್ ಅತ್ಯಾಚಾರ ಪ್ರಕರಣ ಮತ್ತು ಈ ವಿಷಯದಲ್ಲಿ ಸರ್ಕಾರ ನಡೆದುಕೊಂಡ ರೀತಿಗೆ ಇಡೀ ದೇಶದ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಕಳೆದ 2 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು 18 ಅತ್ಯಾಚಾರಗಳು / ಸಾಮೂಹಿಕ ಅತ್ಯಾಚಾರಗಳು ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದೇ ರಾಜ್ಯ ರಾಜ್ಯದ ಪರಿಕಲ್ಪನೆ ? ಎಂದು ರೋಹಿಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣ ನಡೆದಾಗ ಇಡೀ ದೇಶದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಮಾತ್ರವಲ್ಲ ಹಲವು ಸಾಮಾಜಿಕ, ರಾಜಕೀಯ ನಾಯಕರು ಯೋಗಿ ಆಡಳಿತದ ಉತ್ತರ ಪ್ರದೇಶ, ಗೂಂಡಾ ರಾಜ್ಯ, ಅತ್ಯಾಚಾರಿಗಳ ರಾಜ್ಯವಾಗಿ ಪರಿವರ್ತನೆಯಾಗುತ್ತಿದೆ ಎಂದು ಟೀಕಿಸಿದ್ದರು.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group