ರಾಜ್ಯ ಸುದ್ದಿ

ಯೋಗಿ ಸರ್ಕಾರ ರೋಗಿ ಸರ್ಕಾರ: ಡಿಕೆ ಶಿವಕುಮಾರ್

  ರಾಹುಲ್, ಪ್ರಿಯಾಂಕಾ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಪಂಜಿನ ಮೆರವಣಿಗೆ; ಬಂಧನ

 ಪಂಜಿನ ಮೆರವಣಿಗೆ; ಬಂಧನ

ವರದಿಗಾರ (ಅ.2): ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ಪಂಜಿನ ಮೆರವಣಿಗೆ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ಮೌರ್ಯ ಸರ್ಕಲ್ ವೃತ್ತದವರೆಗೆ ಪ್ರತಿಭಟನ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾನಿರತ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಹೈಗ್ರೌಂಡ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬಳಿಕ ಬಿಡುಗಡೆ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ರೋಗಿ ಸರ್ಕಾರ ಆಗಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಇಡೀ ಮನುಕುಲಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು‌.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group