ರಾಷ್ಟ್ರೀಯ ಸುದ್ದಿ

ತನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತೇನೆ ಎಂದ ಬಿಜೆಪಿ ಮುಖಂಡನಿಗೆ ಕೊರೊನಾ

ವರದಿಗಾರ (ಅ.2) ತನಗೆ ಕೊರೊನಾ ಸೋಂಕು ಬಂದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವುದಾಗಿ ವಿವಾದಾತ್ಮಕ ಹೇಳಿದ್ದ ಬಿಜೆಪಿ ಮುಖಂಡ, ಪಶ್ಚಿಮ ಬಂಗಾಳದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಝ್ರಾ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅನುಪಮ್ ಅವರೇ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದು, ತಮಗೆ ಕೊರೊನಾ ಪಾಸಿಟಿವ್ ಇದೆ ಎಂದು ತಿಳಿಸಿದ್ದಾರೆ. ಅವರನ್ನು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಬಂದ ಬಳಿಕ ಅವರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತಮಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಅವರ ವಿರುದ್ಧ ಈಗಾಗಲೇ ಎಫ್ ಐಆರ್ ದಾಖಲಾಗಿದೆ.

2019 ರ ಜನವರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಬಂಗಾಳದ ಬೋಲ್ಪುರದ ಮಾಜಿ ಸಂಸದ ಅನುಪಮ್ ಹಝ್ರಾ ಕಳೆದ ಭಾನುವಾರ, ಒಂದು ವೇಳೆ ತಮಗೆ ಕೋವಿಡ್ ಪಾಸಿಟಿವ್ ಕಂಡುಬಂದರೆ ನಾನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಳಿ ಹೋಗಿ ಅವರನ್ನು ತಬ್ಬಿಕೊಳ್ಳುತ್ತೇನೆ. ರೋಗದಿಂದ ನರಳುವವರ ಮತ್ತು ಈ ರೋಗದಿಂದ ಸಾವನ್ನಪ್ಪಿದವರ ಕುಟುಂಬದವರ ನೋವನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.
ಬಿಜೆಪಿ ಕಾರ್ಯದರ್ಶಿಯಾಗಿ ನೇಮಕಗೊಂಡ ಒಂದು ದಿನದ ನಂತರ ಹಝ್ರಾ ಈ ಹೇಳಿಕೆ ನೀಡಿದ್ದರು.
ಮಹಿಳೆಯೊಬ್ಬಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದರಿಂದ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಹಝ್ರಾ ವಿರುದ್ಧ ಕ್ರಮಕೈಗೊಳ್ಳುವಂತೆ ತೃಣಮೂಲ ಕಾಂಗ್ರೆಸ್ ದೂರು ನೀಡಿತ್ತು. ಅದರಂತೆ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಿಸಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group