ಪ್ರಶಾಂತ್ ಭೂಷಣ್, ಸೀತಾರಾಂ ಯೆಚೂರಿ, ಚಂದ್ರಶೇಖರ್ ಆಜಾದ್ ಭಾಗಿ
ವರದಿಗಾರ (ಅ.2): ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ ಶುಕ್ರವಾರ ಸಂಜೆ ದೆಹಲಿಯ ಜಂತರ್ ಮಂತರ್ ನಲ್ಲಿ ವಿವೀಧ ನಾಗರಿಕ ಸಮಾಜದ ಕಾರ್ಯಕರ್ತರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಹಲವು ರಾಜಕೀಯ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಇಂಡಿಯಾ ಗೇಟ್ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ನಂತರ ರಾಜ್ಪಥ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆಯನ್ನು ಜಂತರ್ ಮಂತರ್ಗೆ ಸ್ಥಳಾಂತರಿಸಲಾಯಿತು.
“ಉತ್ತರಪ್ರದೇಶದಲ್ಲಿ ನಡೆಯುತ್ತಿರುವುದು ಗೂಂಡಾರಾಜ್. ಪೊಲೀಸರು ಗ್ರಾಮವನ್ನು ಸುತ್ತುವರೆದಿದ್ದು, ವಿರೋಧ ಪಕ್ಷದ ನಾಯಕರು ಮತ್ತು ಮಾಧ್ಯಮಗಳಿಗೂ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಅವರು ಸಂತ್ರಸ್ತೆಯ ಕುಟುಂಬ ಸದಸ್ಯರ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಇಟ್ಟುಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆರೋಪಿಸಿದರು.
ಸಂತ್ರಸ್ತ ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ಮೃತ ಯುವತಿಯ ಪಾರ್ಥೀವ ಶರೀರದ ಅಂತ್ಯಸಂಸ್ಕಾರವನ್ನು ಪೊಲೀಸರೇ ನಡೆಸಿರುವುದನ್ನು ಅವರು ತೀವ್ರವಾಗಿ ಖಂಡಿಸಿದರು.
