ವರದಿಗಾರ (ಅ.3): ಉತ್ತರ ಪ್ರದೇಶದ ಸಿಕಂದರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷ ಪ್ರಾಯದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ ಘೋರ ಘಟನೆ ನಡೆದಿದೆ. ಇಡೀ ದೇಶದಲ್ಲಿ ಆಕ್ರೋಶ ಭುಗಿದೇಳಲು ಕಾರಣವಾಗಿದ್ದ ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ ನಡೆದ ಮೂರೇ ದಿನದಲ್ಲಿ ಈ ಘಟನೆ ನಡೆದಿದೆ.
ಶುಕ್ರವಾರ ಬೆಳಗ್ಗೆ ಬಾಲಕಿಯನ್ನು ರಸ್ತ್ರಾ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಲಾಗಿದ್ದು, ಆರೋಪಿ ಆಸಿಫ್ (23) ಎಂಬಾತನನ್ನು ಬಂಧಿಸಲಾಗಿದೆ ಎಂದು ಸಿಕಂದರ್ ಪುರ ಎಚ್ ಎಚ್ ಒ ಅಮರ್ ಜೀತ್ ಯಾದವ್ ತಿಳಿಸಿದ್ದಾರೆ.
ಬುಧವಾರ ಬಾಲಕಿಯನ್ನು ಆರೋಪಿ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಯಾದವ್ ತಿಳಿಸಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
