ರಾಜ್ಯ ಸುದ್ದಿ

ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್‌‌‌ ಪ್ರತಿಭಟನೆ

ವರದಿಗಾರ (ಅ.4): ಉತ್ತ‌ರ ಪ್ರದೇಶದ ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ‌ ಖಂಡಿಸಿ ಕಾಂಗ್ರೆಸ್ ಅ.5ರಂದು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ‌ಗೆ ಕರೆ ನೀಡಿದೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದ ಜನರು ಪ್ರತಿಭಟಿಸಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಉತ್ತರಪ್ರದೇಶದಲ್ಲಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ನಿರ್ಭಯಾ ಪ್ರಕರಣದಲ್ಲಿ ಪ್ರಧಾನಿಯೇ ಮುಂದೆ ನಿಂತು ಸಂತ್ರಸ್ತೆ ಮನೆಯವರ ಕರೆಯಿಸಿಕೊಂಡಿದ್ದರು. ಆದರೆ ಉತ್ತರಪ್ರದೇಶದ ಈ ಪ್ರಕರಣದಲ್ಲಿ ಅವರ ತಂದೆ ತಾಯಿಗೂ ಕೂಡ ಸಂತ್ರಸ್ತೆಯ ಮೃತದೇಹ ನೋಡಲು ಅವಕಾಶ ನೀಡಿಲ್ಲ. ಇದರ ವಿರುದ್ಧ ಸೋಮವಾರ ಬೆಳಿಗ್ಗೆ 11 ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group