ರಾಷ್ಟ್ರೀಯ ಸುದ್ದಿ

ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿಗೆ ಆಗಮಿಸಿದ ಎಸ್ ಪಿ, ಆರ್ ಎಲ್ ಡಿ, ಭೀಮ್ ಸೇವೆ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

ವರದಿಗಾರ (ಅ.4) : ಹತ್ರಾಸ್ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅವರ ಗ್ರಾಮಕ್ಕೆ ಆಗಮಿಸಿದ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮತ್ತು ಭೀಮ್ ಸೇನೆಯ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಒಂದೇ ಸಮಯದಲ್ಲಿ ಐದಕ್ಕೂ ಹೆಚ್ಚು ಜನರು ಊರಿನೊಳಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಪೊಲೀಸರು ರಾಜಕೀಯ ಪಕ್ಷಗಳ ನಿಯೋಗಗಳಿಗೆ ಪ್ರವೇಶ ನಿರಾಕರಿಸಿದಾಗ ಮಾತಿನ ಚಕಮಕಿ ನಡೆದು, ಘರ್ಷಣೆ ನಡೆಯಿತು. ಎಸ್‌ಪಿ ಮತ್ತು ಆರ್‌ಎಲ್‌ಡಿ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆಗೆ ಮುಂದಾಗಿ, ಬ್ಯಾರಿಕೇಡ್ ಗಳನ್ನು ದೂಡಲು ಯತ್ನಿಸಿದ್ದಾರೆ. ಅವರೊಂದಿಗೆ ಭೀಮ್ ಸೇನೆ ಕಾರ್ಯಕರ್ತರೂ ಜತೆಗೂಡಿದ್ದಾರೆ.
ರಾಜಕೀಯ ಪಕ್ಷಗಳ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಘರ್ಷಣೆಗಳು ಆರಂಭವಾಗಿವೆ.

ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ಅವರ ಪುತ್ರ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಸೇರಿದಂತೆ ಅನೇಕರು ಲಾಠಿ ಪ್ರಹಾರಕ್ಕೆ ಒಳಗಾಗಿದ್ದಾರೆ. ಕಲ್ಲು ತೂರಾಟದಲ್ಲಿ ಡಿಎಸ್ಪಿು ಆನಂದ್ ಕುಮಾರ್ ಸೇರಿದಂತೆ ಕೆಲ ಪೊಲೀಸರು ಗಾಯಗೊಂಡಿದ್ದಾರೆ.

ನಂತರ, ಎಸ್‍ ಪಿ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ನೇತೃತ್ವದ ಐವರ ನಿಯೋಗ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿತು. ಬಳಿಕ ಜಯಂತ್ ಚೌಧರಿ ನೇತೃತ್ವದ ಆರ್‌ಎಲ್‌ಡಿಯ ಮತ್ತೊಂದು ನಿಯೋಗ ಕುಟುಂಬ ಸಂದಸ್ಯರನ್ನು ಭೇಟಿ ಮಾಡಿತು. ಈ ಘಟನೆಗಳಿಗೆ ಯೋಗಿ ಆದಿತ್ಯನಾಥ್ ಸರ್ಕಾರವೇ ಹೊಣೆ ಎಂದಿರುವ ಉಭಯ ಪಕ್ಷಗಳ ನಾಯಕರು, ನೈತಿಕ ಹೊಣೆ ಹೊತ್ತು ಆದಿತ್ಯನಾಥ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group