ರಾಷ್ಟ್ರೀಯ ಸುದ್ದಿ

ಹತ್ರಾಸ್ ಸಾಮೂಹಿಕ ಅತ್ಯಾಚಾರದ ಆರೋಪಿಗಳನ್ನು ಬಿಡುಗಡೆ ಮಾಡಿ: ಬ್ರಾಹ್ಮಣ, ಠಾಕೂರ್ ಮಹಾಸಭಾ ಒತ್ತಾಯ

ವರದಿಗಾರ (ಅ.2): ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ರಾಮದಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ನಾಲ್ವರು ಮೇಲ್ಜಾತಿಯ ಯುವಕರನ್ನು ಬೆಂಬಲಿಸಿ ಶುಕ್ರವಾರ ಬ್ರಾಹ್ಮಣ ಮತ್ತು ಠಾಕೂರ್ ಸಮುದಾಯಗಳ ಸದಸ್ಯರು ಮಹಾಪಂಚಾಯತ್ ಸಭೆ ನಡೆಸಿ, ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಿದ್ದರೂ ಅದನ್ನು ಉಲ್ಲಂಘಿಸಿ ಮೇಲ್ಜಾತಿಯ ಸಮುದಾಯಗಳ ಸದಸ್ಯರು ಬಾಗ್ನಾ ಗ್ರಾಮದಲ್ಲಿ ಸಭೆ ನಡೆಸಿ ಸಾಮೂಹಿಕ ಅತ್ಯಾಚಾರ ಆರೋಪಿಗಳಾದ ಸಂದೀಪ್ ಸಿಂಗ್, ರಾಮು, ಲವಕುಶ್, ಸಿಕರ್ ವಾರ್ ಮತ್ತು ರವಿ ನಿರಪರಾಧಿಗಳು ಎಂದು ಘೋಷಿಸಿದರು.

ಈ ನಾಲ್ವರು ಆರೋಪಿಗಳು ಈಗಾಗಲೇ ಪೊಲೀಸ್ ವಶದಲ್ಲಿದ್ದು, ಅವರೆಲ್ಲರೂ ಠಾಕೂರ್ ಜಾತಿಗೆ ಸೇರಿದವರಾಗಿದ್ದಾರೆ.
ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಹಾಪಂಚಾಯತ್ ಸದಸ್ಯರು ಎಚ್ಚರಿಕೆ ನೀಡಿದರು.
ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಉಲ್ಲೇಖಿಸಿದ ಅವರು ಹತ್ರಾಸ್ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿದರು.

ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬ ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮತ್ತು ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಅವರು ಈ ಒತ್ತಾಯ ಮಾಡಿದ್ದಾರೆ.

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವು ಸಾಮೂಹಿಕ ಅತ್ಯಾಚಾರವನ್ನು ದೃಢೀಕರಿಸಿಲ್ಲ, ಆದ್ದರಿಂದ ನಾಲ್ವರು (ಆರೋಪಿಗಳನ್ನು) ಬಿಡುಗಡೆ ಮಾಡಬೇಕು ಎಂದು ಹಸಯನ್ ಬ್ಲಾಕ್‌ನ ಮುಖ್ಯಸ್ಥ ಸುಮಂತ್ ಕಿಶೋರ್ ಸಿಂಗ್ ಒತ್ತಾಯಿಸಿದರು. “ನಾವು ಶನಿವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸದಸ್ಯರನ್ನು ಭೇಟಿ ಮಾಡಿ ಸತ್ಯವನ್ನು ತಿಳಿಸುತ್ತೇವೆ. ಆಗಲೂ ನಮಗೆ ನ್ಯಾಯ ಸಿಗದಿದ್ದರೆ, ದೊಡ್ಡ ಮಟ್ಟದ ಪ್ರತಿಭಟನೆಗೆ ಕರೆ ನೀಡುತ್ತೇವೆ ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡ ಮೇಲ್ಜಾತಿಯ ಸದಸ್ಯರೊಬ್ಬರು ಹೇಳಿದರು.

ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಮೂರು ಸದಸ್ಯರ ಎಸ್‌ಐಟಿಯನ್ನು ರಚಿಸಿದೆ ಮತ್ತು ಈ ವಿಷಯವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ. ಸಂತ್ರಸ್ತೆ ವಾಲ್ಮೀಕಿ (ದಲಿತ) ಸಮುದಾಯಕ್ಕೆ ಸೇರಿದವಳು. ಆಕೆಯನ್ನು ಕ್ರೂರವಾಗಿ ಮತ್ತು ಸಾಮೂಹಿಕ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳು ಮೇಲ್ಜಾತಿಗೆ ಸೇರಿದವರಾಗಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group