ರಾಷ್ಟ್ರೀಯ ಸುದ್ದಿ

ಉಮರ್ ಖಾಲಿದ್ ಗೆ ಜೈಲಿನಲ್ಲಿ ಸೂಕ್ತ ಭದ್ರತೆ ಒದಗಿಸಲು ನ್ಯಾಯಾಲಯ ನಿರ್ದೇಶನ

Umar Khalid

ವರದಿಗಾರ (ಅ.5): ಇದೇ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಉಮರ್ ಖಾಲಿದ್ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ಯಾವುದೇ ಹಾನಿಯಾಗದಂತೆ ಸಮರ್ಪಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಪಟಿಯಾಲ ಹೌಸ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೇವ್ ಸರೋ ಅವರು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಖಾಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ (ಎಫ್‌ಐಆರ್ ಸಂಖ್ಯೆ 101/2020) ದಾಖಲಾಗಿರುವ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸುತ್ತಿದ್ದಾರೆ. ಜೈಲಿನ ನಿಯಮಗಳಿಗೆ ಅನುಸಾರವಾಗಿ ತಮ್ಮ ಕುಟುಂಬ, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಮಾತುಕತೆ ನಡೆಸಲು ಅನುಮತಿ ನೀಡಬೇಕು ಎಂದು ಖಾಲಿದ್ ತಮ್ಮ ವಕೀಲರಾದ ತ್ರಿದೀಪ್ ಪೈಸ್, ಸನ್ಯಾ ಕುಮಾರ್ ಮತ್ತು ರಕ್ಷಂದಾ ದೇಕಾ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದರು.

ತನ್ನ ಪೊಲೀಸ್ ಕಸ್ಟಡಿ ಅವಧಿಯಲ್ಲಿ ತಾವು ಯಾವುದೇ ಹೇಳಿಕೆ ಅಥವಾ ದಾಖಲೆಗಳಿಗೆ ಸಹಿ ಮಾಡಿಲ್ಲ ಎಂದು ಖಾಲಿದ್ ಅರ್ಜಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಜೈಲು ಅಧಿಕಾರಿಗಳ ಉಪಸ್ಥಿತಿರಹಿತವಾಗಿ ವಾರಕ್ಕೆ ಎರಡು ಬಾರಿ ತಮ್ಮ ವಕೀಲರೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಲು ಅವಕಾಶ ಕಲ್ಪಿಸಬೇಕು. ಒಂದು ಸಂವಹನಕ್ಕೆ ಕನಿಷ್ಠ 30 ನಿಮಿಷ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಹೊರಗಿನಿಂದ ಕೆಲವು ಪುಸ್ತಕಗಳನ್ನು ತಂದು ಓದಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಜೈಲಿನ ನಿಯಮಗಳ ವ್ಯಾಪ್ತಿಯಲ್ಲಿ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ನ್ಯಾಯಾಧೀಶರು ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group