ವರದಿಗಾರ (ಅ.6): ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಗೆ ಕಾರಣ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಫೇಸ್ಬುಕ್ ಪೋಸ್ಟ್ ಹಾಕಿದ ಆರೋಪಿ ನವೀನ್ ಪಿ.ಗೆ ಬೆಂಗಳೂರಿನ ಸಿವಿಲ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ನವೀನ್ ಕುಮಾರ್ ಫೇಸ್ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಮತ್ತು ಡಿಜಿಹಳ್ಳಿಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಮೃತಪಟ್ಟಿದ್ದರು. 300ಕ್ಕೂ ಅಧಿಕ ಜನರನ್ನು ಬಂಧಿಸಲಾಗಿತ್ತು.
ನವೀನ್ ಇಂತಹ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುವುದು ಇದೇ ಮೊದಲ ಬಾರಿಯಲ್ಲ. ಆದ್ದರಿಂದ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿ ಜಾಮೀನು ನೀಡಬಾರದು ಎಂದು ಸರ್ಕಾರಿ ಅಭಿಯೋಜಕರು ವಾದಿಸಿದ್ದರು.
