ಜಿಲ್ಲಾ ಸುದ್ದಿ

ಶಾಂತಿ, ಸೌಹಾರ್ದದಿಂದ ಹಬ್ಬ ಆಚರಿಸುವ ಮೂಲಕ ಉತ್ತಮ ಸಮಾಜ ಕಟ್ಟಲು ಮುಂದಾಗೋಣ: ಡಿವೈಎಸ್ಪಿ ಬಿ.ಎಸ್. ಶ್ರೀನಿವಾಸ್

ಉಪ್ಪಿನಂಗಡಿ:ಶಾಂತಿ, ಸೌಹಾರ್ದದಿಂದ ಹಬ್ಬ ಆಚರಿಸುವ ಮೂಲಕ ಉತ್ತಮ ಸಮಾಜ ಕಟ್ಟಲು ಮುಂದಾಗೋಣ ಎಂದು ಪುತ್ತೂರು ಡಿವೈಎಸ್ಪಿ ಬಿ.ಎಸ್. ಶ್ರೀನಿವಾಸ್ ಹೇಳಿದ್ದಾರೆ.
ಅವರು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮ ಸಂಘಟಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸಾರ್ವಜನಿಕವಾಗಿ ಹಬ್ಬ ಆಚರಿಸುವಾಗ ಸಮಾಜದ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಂಘಟಕರು ನಿರ್ವಹಿಸಬೇಕು. ಯಾರಿಗೂ ತೊಂದರೆ ಆಗದಂತೆ ಹಬ್ಬ ಆಚರಣೆ ನಡೆಸುವವರಿಗೆ ಪೊಲೀಸ್ ಇಲಾಖೆಯಿಂದಲೂ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶ್ರೀನಿವಾಸ್ ಹೇಳಿದರು.
ಹಬ್ಬದ ಮೆರವಣಿಗೆ ನಡೆಸುವ ಸಂದರ್ಭ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಂಘಟಕರದ್ದಾಗಿದೆ. ಕಾರ್ಯಕ್ರಮದ ಸಮಯದಲ್ಲಿ ಧರ್ಮ, ಭಾಷೆ, ಸಂಘಟನೆಗಳ ಭಾವನೆಗಳಿಗೆ ಧಕ್ಕೆಯಾಗದಂತೆ ಶಾಂತಿಯುತವಾಗಿ ಕಾರ್ಯಕ್ರಮ ಸಂಘಟಿಸಬೇಕು ಎಂದರು.
ಸಾರ್ವಜನಿಕ ಆಸ್ತಿ, ಸೊತ್ತುಗಳಿಗೆ ನಷ್ಟವಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಬ್ಯಾನರ್, ಬಂಟಿಂಗ್ಸ್, ಧ್ಜಜ, ಕಮಾನುಗಳನ್ನು ಹಾಕಿದ್ದಲ್ಲಿ ಅದಕ್ಕೆ ಕಾರ್ಯಕ್ರಮ ಸಂಘಟಕರೇ ಜವಾಬ್ದಾರರು. ಧ್ವನಿವರ್ಧಕ ಬಳಸುವುದಾದಲ್ಲಿ ಪೊಲೀಸ್ ಇಲಾಖೆಯ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಮೆರವಣಿಗೆಯಲ್ಲಿ ಉದ್ರೇಕಕಾರಿ ಘೋಷಣೆಗಳನ್ನು ಕೂಗದಂತೆ ಎಚ್ಚರ ವಹಿಸಬೇಕು ಹಾಗೂ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸಂಘಟಕರೇ ಹೊಣೆಯೆಂದು ಹೇಳಿದ್ದಾರೆ.
ಮಾನವ ಪಿರಮಿಡ್ ರಚಿಸುವುದಾದರೆ, 14 ವರ್ಷಕ್ಕಿಂತ ಕೆಳಗಿನವರನ್ನು ಹತ್ತಿಸಬಾರದು ಎಂಬುದು ಸೇರಿದಂತೆ ಹಲವು ನಿಯಾಮವಳಿಗಳನ್ನು ಸುಪ್ರೀಂ ಕೋರ್ಟ್ ರೂಪಿಸಿದೆ. ಇದನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ನಿಯಮವನ್ನು ಉಲ್ಲಂಘಿಸುವಂತಿಲ್ಲ. ಶ್ರೀ ಗಣೇಶೋತ್ಸವ ಪೆಂಡಾಲ್ ಹಾಕಿದ್ದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಉತ್ತಮವೆಂದು ಹೇಳಿದ್ದಾರೆ. ಆದರೆ, ಎಷ್ಟು ದಿನ ಪೆಂಡಾಲ್ ಇರುತ್ತದೋ, ಅಷ್ಟು ದಿನ ಒಬ್ಬ ಸ್ವಯಂಸೇವಕನನ್ನು ಅಲ್ಲಿ ಕಡ್ಡಾಯವಾಗಿ ನಿಯೋಜಿಸಬೇಕು. ಗಣೇಶ ವಿಗ್ರಹದ ವಿಸರ್ಜನೆ ಸಂದರ್ಭವೂ ಎಚ್ಚರವಹಿಸಬೇಕು ಎಂದು ಹೇಳಿದ ಅವರು, ಶಾಂತಿ, ಸೌಹಾರ್ದದಿಂದ ಹಬ್ಬ ಆಚರಿಸುವ ಮೂಲಕ ಉತ್ತಮ ಸಮಾಜ ಕಟ್ಟಲು ಮುಂದಾಗೋಣ ಎಂದರು.
ಉಪ್ಪಿನಂಗಡಿ ಠಾಣಾ ಪ್ರೊಬೆಷನರಿ ಸಬ್‌ ಇನ್‌ಸ್ಪೆಕ್ಟರ್‌ ಅವಿನಾಶ್, ವಿವಿಧ ಸಂಘಟನೆಯ ಮುಖಂಡರಾದ ಚಂದ್ರ ಶೇಖರ ಮಡಿವಾಳ, ರವಿ ಇಳಂತಿಲ, ಕಿರಣ್ ಕುಮಾರ್, ರವಿ, ಸದಾನಂದ ನೆಕ್ಕಿಲಾಡಿ, ಕುಶಾಲಪ್ಪ ಇದ್ದರು. ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ಅನಿಲ್ ಕುಲಕರ್ಣಿ ಸ್ವಾಗತಿಸಿ, ದೇವದಾಸ್ ವಂದಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group