ವರದಿಗಾರ (ಅ.6): ದೆಹಲಿಯಿಂದ ಹತ್ರಾಸ್ ಗೆ ತೆರಳುತ್ತಿದ್ದ ನಾಲ್ವರು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಕೆಲವು ಸಂಶಯಾಸ್ಪದ ವ್ಯಕ್ತಿಗಳು ಬರುತ್ತಿದ್ದಾರೆ ಎಂಬ ಮಾಹಿತಿಯ ಮೇಲೆ ಕಾರೊಂದರಲ್ಲಿ ಬರುತ್ತಿದ್ದ ಅತೀಕುರ್ರಹ್ಮಾನ್, ಸಿದ್ದೀಕ್, ಮಸೂದ್ ಅಹ್ಮದ್ ಮತ್ತು ಆಲಂ ಎಂಬ ನಾಲ್ವರು ಯುವಕರನ್ನು ಬಂಧಿಸಲಾಗಿದೆ. ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಹೋದರ ಸಂಸ್ಥೆಯಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ.
ಅವರಿಂದ ಮೊಬೈಲ್ ಫೋನ್, ಒಂದು ಲ್ಯಾಪ್ ಟಾಪ್, ಕೆಲವು ಸಾಹಿತ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹದ್ದು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
