ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಕ್ರಮೇಣ ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ: ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್

ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಾಫಿಯಾ–ರಾಜ್ ಅಸ್ತಿತ್ವದಲ್ಲಿದೆ ಎಂದು ಘೋಷ್‌ ಅವರು ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ : ಟಿಎಂಸಿ ತಿರುಗೇಟು

ವರದಿಗಾರ (ಅ.6): ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಇದು ಕ್ರಮೇಣ ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೋಮವಾರ ಹೇಳಿದ್ದಾರೆ.
ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ ಆ ಎರಡು ರಾಜ್ಯಗಳಲ್ಲಿ ಮಾಫಿಯಾ-ಆಡಳಿತ ಅಸ್ತಿತ್ವದಲ್ಲಿದೆ ಎಂಬುದನ್ನು ಒಪ್ಪಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದೆ.

ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್‌ ವ್ಯವಸ್ಥೆಗೆ ಜಾರುತ್ತಿದೆ. ಪೊಲೀಸ್ ಠಾಣೆಯ ಮುಂದೆ ಕೌನ್ಸಿಲರ್‌ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ ಎಂದು ದಿಲೀಪ್ ಘೋಷ್‌ ಹೇಳಿದ್ದಾರೆ.

24 ಪರಗಣ ಜಿಲ್ಲೆಯ ತಿತಾಗರ್‌ನಲ್ಲಿ ಪೊಲೀಸ್‌ ಠಾಣೆಯ ಎದುರೇ ಬಿಜೆಪಿ ನಾಯಕ ಮನೀಷ್‌ ಶುಕ್ಲಾ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಘೋಷ್‌, ಪಶ್ಚಿಮ ಬಂಗಾಳವು ಮಾಫಿಯಾ ರಾಜ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಂತಹ ಅರಾಜಕ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ಮತದಾನ ಸಾಧ್ಯವೇ ಎಂದು ಘೋಷ್ ಪ್ರಶ್ನಿಸಿದ್ದಾರೆ.
ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮಾಫಿಯಾ–ರಾಜ್ ಅಸ್ತಿತ್ವದಲ್ಲಿದೆ ಎಂದು ಘೋಷ್‌ ಅವರು ಒಪ್ಪಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ತಿರುಗೇಟು ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group