ರಾಷ್ಟ್ರೀಯ ಸುದ್ದಿ

ಎಡಪಕ್ಷಗಳಿಂದ ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ನ್ಯಾಯಾಂಗ ತನಿಖೆಗೆ ಆಗ್ರಹ

ವರದಿಗಾರ (ಅ.6): ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಅತ್ಯಾಚಾರಕ್ಕೊಳಗಾಗಿ, ಹತ್ಯೆಯಾದ 19 ವರ್ಷದ ಯುವತಿಯ ಕುಟುಂಬ ಸದಸ್ಯರನ್ನು ಸಿಪಿಐ ಮತ್ತು ಸಿಪಿಐ(ಎಂ) ಸದಸ್ಯರ ನಿಯೋಗ ಭೇಟಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ್ಯ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಸಿಪಿಐ (ಎಂ) ಪೊಲಿಟ್ ಬ್ಯೂರೋ ಸದಸ್ಯ ಬೃಂದಾ ಕ್ಯಾರಟ್‌, ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಮರ್ಜೀತ್ ಕೌರ್, ಸಿಪಿಐ (ಎಂ), ಉತ್ತರಪ್ರದೇಶ ರಾಜ್ಯ ಕಾರ್ಯದರ್ಶಿ ಹಿರಾಲಾಲ್ ಯಾದವ್ ಮತ್ತು ಸಿಪಿಐ, ಯುಪಿ ರಾಜ್ಯ ಕಾರ್ಯದರ್ಶಿ ಡಾ.ಗಿರೀಶ್ ಇದ್ದರು.

ಸಂತ್ರಸ್ತ ಕುಟುಂಬ ಸದಸ್ಯರು ತಮ್ಮ ಭದ್ರತೆ ಕುರಿತು ಆತಂಕ ಹೊಂದಿದ್ದು, ನ್ಯಾಯ ಸಿಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ನಿಯೋಗದ ಸದಸ್ಯರು ತಿಳಿಸಿದರು. ಉತ್ತರಪ್ರದೇಶ ಸರ್ಕಾರ ಸಂವಿಧಾನಬದ್ಧವಾಗಿ ಕೆಲಸ ಮಾಡಿ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆ ಬದಲು, ನ್ಯಾಯಾಂಗ ತನಿಖೆಗೆ ವಹಿಸಬೇಕು. ಸುಪ್ರೀಂಕೋರ್ಟ್‌ ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group