ವರದಿಗಾರ (ಅ.6): ಅಕ್ಟೋಬರ್ 15 ರಿಂದ ಶಾಲೆಗಳ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಸೋಂಕು ಏರುಗತಿಯ ಮಧ್ಯದಲ್ಲಿದೆ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭಿಸುವುದು ಸಮಂಜಸವಲ್ಲ ಎಂದು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುತ್ತಿಲ್ಲ ಎಂದು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ದಸರಾ ಮನರಂಜನಾ ಕಾರ್ಯಕ್ರಮ ಇಲ್ಲ; ಕೇರಳದಲ್ಲಿ ಓಣಂ ಸಂದರ್ಭದಲ್ಲಿ ಆದ ಲೋಪ ದಸರಾ ಸಂದರ್ಭದಲ್ಲಿ ಮರುಕಳಿಸಬಾರದು. ಉತ್ಸವ ಸಂದರ್ಭದಲ್ಲಿ 50 ಜನರಿಗಿಂತ ಹೆಚ್ಚು ಮಂದಿ ಸೇರಬಾರದು, ಕಾವೇರಿ ತೀರ್ಥೋದ್ಭವ ಸಂದರ್ಭದಲ್ಲಿ ಸ್ನಾನ ಮಾಡುವುದು ಮತ್ತು ದಸರಾ ಮನರಂಜನಾ ಕಾರ್ಯಕ್ರಮಗಳನ್ನು ಈ ವರ್ಷ ನಿರ್ಬಂಧಿಸಲಾಗುವುದು ಎಂದರು.
