ರಾಷ್ಟ್ರೀಯ ಸುದ್ದಿ

ಮಾಧ್ಯಮ, ಸ್ವತಂತ್ರ ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಿದರೆ ಮೋದಿ ಸರ್ಕಾರ ಪತನ: ರಾಹುಲ್ ಗಾಂಧಿ

ವರದಿಗಾರ (ಅ.6): ಮಾಧ್ಯಮಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದರೆ ನರೇಂದ್ರ ಮೋದಿ ಸರ್ಕಾರ ಪತನಗೊಳ್ಳುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದುರ್ಬಲ ಪ್ರತಿಪಕ್ಷದಿಂದಾಗಿಯೇ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಅವರು, ಯಾವುದೇ ದೇಶದಲ್ಲಿ ಜನರ ಧ್ವನಿಯನ್ನು ರಕ್ಷಿಸುವ ಮಾಧ್ಯಮಗಳು, ನ್ಯಾಯಾಂಗ ವ್ಯವಸ್ಥೆ ಮತ್ತು ಸ್ವತಂತ್ರ ಸಂಸ್ಥೆಗಳು ಸೇರಿದಂತೆ ಪ್ರತಿಪಕ್ಷ ಒಂದು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತವೆ, ‘ಭಾರತದಲ್ಲಿ ಇಡೀ ಕಾರ್ಯಚೌಕಟ್ಟನ್ನು ಬಿಜೆಪಿ ಸರ್ಕಾರ ನಿಯಂತ್ರಿಸಿದೆ ಮತ್ತು ವಶಕ್ಕೆ ತೆಗೆದುಕೊಂಡಿದೆ. ಜನರಿಗೆ ಧ್ವನಿ ನೀಡಲು ವಿನ್ಯಾಸಗೊಳಿಸಲಾದ ಸಂಪೂರ್ಣ ವ್ಯವಸ್ಥೆಯನ್ನು ವಶಕ್ಕೆ ತೆಗೆದುಕೊಂಡಿದೆ.’ ಎಂದು ಆರೋಪಿಸಿದ್ದಾರೆ.

ಮುಕ್ತ ಮಾಧ್ಯಮ ಮತ್ತು ಸ್ವತಂತ್ರ ಸಂಸ್ಥೆಗಳನ್ನು ನನಗೆ ನೀಡಿ. ಈ (ನರೇಂದ್ರ ಮೋದಿ) ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಸವಾಲು ಹಾಕಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ಪಂಜಾಬ್‌ನಲ್ಲಿ ‘ಖೇತಿ ಬಚಾವೊ’ ಯಾತ್ರೆಯ ಮೂರನೇ ಮತ್ತು ಅಂತಿಮ ದಿನದಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group