ರಾಷ್ಟ್ರೀಯ ಸುದ್ದಿ

ಕೃಷಿ ಕಾಯ್ದೆ ಪರವಾಗಿ ಕೋರ್ಟ್ ಮೊರೆ ಹೋದ ಹಿಂದೂ ಧರ್ಮ ಪರಿಷತ್: ಕಾರ್ಮಿಕ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಬಿಎಂಎಸ್

ವರದಿಗಾರ (ಅ.7): ಕೃಷಿ ಸಂಬಂಧಿತ ಕಾಯ್ದೆಗಳನ್ನು ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಮತ್ತು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಪ್ರತಿಭಟನೆಯ ವಿರುದ್ಧ ನಿಯಮಗಳು ಮತ್ತು ಮಾರ್ಗಸೂಚಿ ರಚಿಸುವಂತೆ ಸೂಚಿಸಬೇಕು ಎಂದು ಹಿಂದೂ ಧರ್ಮ ಪರಿಷತ್ , ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ದೇಶಾದ್ಯಂತ ರೈತ ಕಾಯ್ದೆಗಳಿಗೆ ಸಂಬಂಧಿಸಿದ ಯಾವುದೇ ಹೇಳಿಕೆ ಅಥವಾ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಲೆಕ್ಟ್ರಾನಿಕ್ ದೂರಸಂಪರ್ಕ, ಇಂಟರ್ ನೆಟ್ , ಫೇಸ್‌ಬುಕ್, ವಾಟ್ಸಾಪ್, ಟೆಲಿಗ್ರಾಮ್, ಪೋಸ್ಟರ್‌ಗಳು, ಫ್ಲೆಕ್ಸ್ ಬ್ಯಾನರ್ ಅಥವಾ ಇನ್ನಾವುದೇ ಎಲೆಕ್ಟ್ರಾನಿಕ್ ಮೂಲಕ ನಡೆಯುವ ಸಂವಹನವನ್ನು ನಿಷೇಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಕಾಯಿದೆಗಳು ರೈತ ಪರವಾಗಿದ್ದು, ಕೃಷಿಯ ಪರವಾಗಿವೆ ಎಂದು ಮನವಿಯಲ್ಲಿ ಹೇಳಲಾಗಿದೆ. ಈ ಮಧ್ಯೆ, ಆರ್ ಎಸ್ ಎಸ್ ಅಂಗಸಂಸ್ಥೆಯಾದ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್), ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಕ್ಟೋಬರ್ 28ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಗತ್ಯವಿದ್ದರೆ ದೇಶಾದ್ಯಂತ ಮುಷ್ಕರ ನಡೆಸಲಾಗುವುದು ಎಂದು ಬಿಎಂಎಸ್ ಎಚ್ಚರಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group