ರಾಷ್ಟ್ರೀಯ ಸುದ್ದಿ

ಅನಿರ್ದಿಷ್ಟಕಾಲ ಸಾರ್ವಜನಿಕ ಸ್ಥಳದ ಆಕ್ರಮಣ ಸ್ವೀಕಾರಾರ್ಹವಲ್ಲ: ಸುಪ್ರೀಂ ಕೋರ್ಟ್

ವರದಿಗಾರ (ಅ.7): ಪ್ರತಿಭಟನೆ ಅಥವಾ ಧರಣಿ ಹೆಸರಲ್ಲಿ ಸಾರ್ವಜನಿಕ ಸ್ಥಳಗಳು ಅಥವಾ ರಸ್ತೆಗಳನ್ನು ಅನಿರ್ದಿಷ್ಟಕಾಲ ಆಕ್ರಮಿಸಿಕೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಶಾಹೀನ್‌ ಬಾಗ್ ಪ್ರದೇಶದಲ್ಲಿ ರಸ್ತೆ ಬಂದ್‌ ಮಾಡಿರುವುದರ ವಿರುದ್ಧ ವಕೀಲ ಅಮಿತ್ ಸಾಹ್ನಿ ಅವರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೆ.ಕೌಲ್‌ ಅವರ ನೇತೃತ್ವದ ನ್ಯಾಯಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.

ಜತೆಗೆ, ಶಾಹೀನ್‌ಬಾಗ್‌ನಲ್ಲಿರುವ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ತಿಳಿಸಿದೆ. ‘ಪ್ರಜಾಪ್ರಭುತ್ವ ಮತ್ತು ಭಿನ್ನಾಭಿಪ್ರಾಯಗಳು ಜತೆಯಾಗಿಯೇ ಸಾಗಬೇಕು’ ಎಂದು ಹೇಳಿರುವ ನ್ಯಾಯಪೀಠ, ಇಂಥ ಸನ್ನಿವೇಶಗಳನ್ನು ನಿರ್ವಹಿಸುವಾಗ ಆಡಳಿತಗಳು ನ್ಯಾಯಾಲಯದ ಹಿಂದೆ ಅಡಗಿಕೊಳ್ಳದೇ, ತಮ್ಮ ವಿವೇಚನೆಯೊಂದಿಗೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group