ವರದಿಗಾರ (ಅ.8): ಕೃಷಿ ಸಂಬಂಧಿತ ಕಾಯ್ದೆ ವಿರೋಧಿಸಿ ಹರಿಯಾಣದ ಸಿರ್ಸದಲ್ಲಿ ಬುಧವಾರ ರೈತರು ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಸೇರಿದಂತೆ 100ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಬಳಿ ರೈತರಿಗೆ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ಆದರೆ ಯೋಗೇಂದ್ರ ಯಾದವ್, ಹರಿಯಾಣ ಕಿಸಾನ್ ಮಂಚ್ ಮುಖ್ಯಸ್ಥ ಪ್ರಹ್ಲಾದ್ ಸಿಂಗ್ ಹಾಗೂ ರೈತರು ಸಿರ್ಸ ಹೆದ್ದಾರಿಯಲ್ಲಿ ಧರಣಿ ಕುಳಿತು ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಿರ್ಸದಲ್ಲಿ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಜೊತೆ ಸೇರಿದ್ದಕ್ಕೆ ತಮ್ಮನ್ನು ಹಾಗೂ 100ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿರುವುದಾಗಿ ಯಾದವ್ ಟ್ವಿಟರ್ ಮೂಲಕ ತಿಳಿಸಿದ್ದಾರೆ.
