ರಾಜ್ಯ ಸುದ್ದಿ

ಸಿದ್ದರಾಮಯ್ಯ ಜಾಣ ಪೆದ್ದ; ಕುಮಾರಸ್ವಾಮಿ ವ್ಯಂಗ್ಯ

ವರದಿಗಾರ (ಅ.8): ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಅರ್ಧಚಂದ್ರ ಪ್ರಯೋಗ ಮಾಡಿದ್ದ ರಾಜ್ಯದ ಜನತೆ ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬುದು ಕೇವಲ ಸಿದ್ದರಾಮಯ್ಯ ಅವರ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು.

ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ ಎಂದು ಮತ್ತೆ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯರೇ ಕಾರಣ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group