ಜಿಲ್ಲಾ ಸುದ್ದಿ

ದೇವಸ್ಥಾನದ ಅರ್ಚಕನಿಂದ ಬಾಲಕಿಯ ಮೇಲೆ ಅತ್ಯಾಚಾರ: 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ವರದಿಗಾರ (ಅ.8): ಶಾಲೆಯಲ್ಲಿ ಹೆಚ್ಚಿನ ಅಂಕ ಕೊಡಿಸುವುದಾಗಿ ಬಾಲಕಿಯೊಬ್ಬಳನ್ನು ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದ ಅರ್ಚಕನಿಗೆ ಶಿವಮೊಗ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ಶಿವಕುಮಾರ್ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2016ರಲ್ಲಿ ಬಾಲಕಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಕೊಡಿಸುವಾಗಿ ಆಮಿಷಒಡ್ಡಿ ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದರು ಎಂದು ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು.
ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್ ಅವರು ಆರೋಪಿಗೆ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group