ವರದಿಗಾರ (ಅ.8): ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ, ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಇಂದು ನಿಧನರಾಗಿದ್ದಾರೆ. ಅವರಿಗೆ 74 ವಷ೯ ವಯಸ್ಸಾಗಿತ್ತು. ವಾರದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ಅವರು 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಬಿಹಾರ ಮೂಲದ ಅವರು, 1969 ರಿಂದಲೇ ಸಕ್ರಿಯ ರಾಜಕಾರಣದಲ್ಲಿದ್ದರು. ದೆಹಲಿಯ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರೆ. ಎಂಟು ಬಾರಿ ಸಂಸತ್ ಸದಸ್ಯರಾಗಿದ್ದ ಪಾಸ್ವಾನ್ ಇಂದಿರಾ ಗಾಂಧಿಯವರ ಅವಧಿಯಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಜೈಲಿಗೆ ಹೋಗಿದ್ದರು. ಅವರು ಸಂಯುಕ್ತ ಸೋಷಿಯಲಿಸ್ಟ್ ಪಾರ್ಟಿ ಸದಸ್ಯರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ, 1969 ರಲ್ಲಿ ಮೊದಲ ಬಾರಿಗೆ ಬಿಹಾರ ವಿಧಾನಸಭೆಯ ಸದಸ್ಯರಾಗಿದ್ದರು. ಪಾಸ್ವಾನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
