ರಾಜ್ಯ ಸುದ್ದಿ

ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರು ಕೇಳಿರುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಬಂದಿಲ್ಲ: ಸಿದ್ದರಾಮಯ್ಯ

ವರದಿಗಾರ (ಅ.9): ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆಯ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ಇನ್ನೂ ಉತ್ತರ ನೀಡಿಲ್ಲ. ಇದು ಸರ್ಕಾರದ ಬೇಜವಾಬ್ದಾರಿಯುತ ನಡೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಹದಿನೈದನೇ ವಿಧಾನಸಭೆಯ 7ನೇ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಸಲ್ಲಿಸಿದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟ ಸಚಿವರು ಸಮರ್ಪಕವಾಗಿ ಉತ್ತರ ನೀಡಿಲ್ಲ. ಕಾಂಗ್ರೆಸ್ ಶಾಸಕರು ಸದನದಲ್ಲಿ ಕೇಳಿದ 969 ಪ್ರಶ್ನೆಗಳ ಪೈಕಿ ಸರ್ಕಾರದಿಂದ ಇದುವರೆಗೂ 594 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿದೆ. ಅಧಿವೇಶನ ಮುಗಿದು ಮೂರು ವಾರಗಳಾಗುತ್ತಾ ಬಂದರೂ ಕೇಳಿರುವ ಪ್ರಶ್ನೆಗಳಿಗೆ ಉತ್ತರ ನೀಡದೆ ಇರುವುದು ಸರ್ಕಾರದ ಬೇಜವಾಬ್ದಾರಿಯುತ ನಡೆಯಾಗಿರುತ್ತದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದಾರೆ.

ಬಂದಿರುವ ಉತ್ತರಗಳೂ ಕೂಡ ಪೂರ್ಣ ಪ್ರಮಾಣದಲ್ಲಿಲ್ಲ. ಈ ಪ್ರಶ್ನೆಗಳೆಲ್ಲವೂ ಸಾರ್ವಜನಿಕವಾಗಿ ಮಹತ್ವದವುಗಳಾಗಿರುವುದರಿಂದ ಅತ್ಯಂತ ತುರ್ತಾಗಿ ಹಾಗೂ ಸಮರ್ಪಕವಾಗಿ ಉತ್ತರಗಳನ್ನು ಸಂಬಂಧಿಸಿದ ಶಾಸಕರಿಗೆ ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸುವಂತೆ ಸಭಾಧ್ಯಕ್ಷರಿಗೆ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group