ರಾಜ್ಯ ಸುದ್ದಿ

ಪ್ರತಿಭಟನೆ ನಡೆಸಿದ ರೈತರನ್ನು ಭಯೋತ್ಪಾದಕರು ಎಂದ ರಾಣಾವತ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ

ವರದಿಗಾರ (ಅ.9): ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ರೈತರನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕದ ತುಮಕೂರು ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ನ್ಯಾಯವಾದಿ ಎಲ್ ರಮೇಶ್ ನಾಯಕ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ರಾಣಾವತ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್‌ಸಿ) ನ್ಯಾಯಾಲಯ ಕ್ಯಾತಸಂದ್ರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅವರಿಗೆ ನಿರ್ದೇಶನ ನೀಡಿದೆ.

ನಟಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಮತ್ತು ವಿಚಾರಣೆ ನಡೆಸುವಂತೆ ನ್ಯಾಯಾಲಯವು ಪೊಲೀಸ್ ಠಾಣೆಗೆ ನಿರ್ದೇಶನ ನೀಡಿದೆ ಎಂದು ಕ್ಯಾತಸಂದ್ರ ಮೂಲದ ವಕೀಲ ನಾಯಕ್ ಮಾಹಿತಿ ನೀಡಿದ್ದಾರೆ.

ಗಲಭೆಗೆ ಕಾರಣವಾದ ಸಿಎಎ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿದ ಜನರು ಈಗ ರೈತರ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಮತ್ತು ದೇಶದಲ್ಲಿ ಭಯೋತ್ಪಾದನೆಯನ್ನು ಸೃಷ್ಟಿ ಮಾಡುತ್ತಿದ್ದಾರೆ, ಅವರು ಭಯೋತ್ಪಾದಕರು ಎಂದು ರಾಣಾವತ್ ಸೆಪ್ಟೆಂಬರ್ 21 ರಂದು ತನ್ನ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದರು.
ರಾಣಾವತ್ ಅವರ ಟ್ವೀಟ್ ನಿಂದ ತಮಗೆ ನೋವುಂಟು ಮಾಡಿದೆ ಮತ್ತು ಅವರ ವಿರುದ್ಧ ಪ್ರಕರಣ ದಾಶಖಲಿಸಬೇಕು ಎಂದು ನಾಯಕ್ ಅರ್ಜಿಯಲ್ಲಿ ಮನವಿ ಮಾಡಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group