ರಾಷ್ಟ್ರೀಯ ಸುದ್ದಿ

ಅಸ್ಸಾಂನಲ್ಲಿ ಸರ್ಕಾರದ ಅನುದಾನದಲ್ಲಿ ನಡೆಯುತ್ತಿದ್ದ ಮದರಸಾ ಬಂದ್

ವರದಿಗಾರ (ಅ.12) ಅಸ್ಸಾಂ ಸರ್ಕಾರ ನಡೆಸುತ್ತಿರುವ ಎಲ್ಲ ಮದರಸಾ ಹಾಗೂ ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುವುದು. ಧಾರ್ಮಿಕ ಶಿಕ್ಷಣಕ್ಕೆ ಸರ್ಕಾರದಿಂದ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಅಸ್ಸಾಂ ಶಿಕ್ಷಣ ಹಾಗೂ ಹಣಕಾಸು ಸಚಿವ ಹಿಮಾಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ.

ಸರ್ಕಾರದ ನಿಧಿಯಿಂದ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡುವುದಿಲ್ಲ. ಆದರೆ ಖಾಸಗಿ ಸಂಸ್ಕೃತ ಶಾಲೆಗಳು ಹಾಗೂ ಮದರಸಾಗಳ ಬಗ್ಗೆ ನಾವು ಏನನ್ನೂ ಹೇಳುವುದಿಲ್ಲ. ಇದು ನಮ್ಮ ಸರ್ಕಾರದ ನೀತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ನವೆಂಬರ್ ನಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ಮದರಸಾಗಳನ್ನು ಮುಚ್ಚಿದ ಬಳಿಕ 48 ಶಿಕ್ಷಕರನ್ನು ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಶಾಲೆಗಳಿಗೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದಿನ್ ಅಜ್ಮಲ್ ಸರ್ಕಾರದ ಈ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಮುಚ್ಚಿದ ಮದ್ರಸ ತೆಗೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group