ವರದಿಗಾರ (ಅ.12) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಂದ ಕಿತ್ತು ಸುಧಾಕರ್ಗೆ ನೀಡಿರುವುದು ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಮಾಡದೇ ಹೀಗೆ ಏಕಾಏಕಿ ಖಾತೆ ಕಸಿದುಕೊಂಡಿರುವುದು ಸರಿಯಲ್ಲ ಎಂದು ಶಿವಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಸೋಂಕು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಶ್ರೀರಾಮುಲು ಖಾತೆ ಬದಲಾವಣೆ ಮಾಡಲಾಗಿದೆ. ಇದು ಸರ್ಕಾರ ಕೋವಿಡ್ ಎದುರಿಸಲು ಸಂಪೂರ್ಣವಾಗಿ ವಿಫಲವಾಗಿದ್ದಕ್ಕೆ ಎಂದು ಮುಖ್ಯಮಂತ್ರಿಯವರೇ ಖಾತೆ ಬದಲಾವಣೆ ಮಾಡಿರುವುದು ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಂತಾಗಿದೆ ಎಂದು ಡಿಕೆಶಿ ಟ್ವೀಟ್ ಮೂಲಕ ಕುಟುಕಿದ್ದಾರೆ.
