ರಾಜ್ಯ ಸುದ್ದಿ

ಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ಹೆಣ್ಣಿನ ನೋವಿನ ಅರಿವಿಲ್ಲ; ಉಮಾಶ್ರೀ ಟಾಂಗ್

ವರದಿಗಾರ ( ಅ.12) ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು ? ಮಾಡುತ್ತಿರುವವರು ಯಾರು ? ಎನ್ನುವುದನ್ನು ಇಡೀ ದೇಶವೇ ನೋಡಿದೆ ನೋಡುತ್ತಿದೆ ಎಂದು ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಹಾಗೂ ಆರ್ ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಹಾಕಿರುವ ಕುಸುಮಾ, ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ, ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ, ಸತ್ಯ ಮನದಟ್ಟಾಗುತ್ತದೆ ಎಂದು ಕುಸುಮಾ ಹೇಳಿದ್ದಾರೆ.

ಐಎಎಸ್ ಅಧಿಕಾರಿ ದಿ.ಡಿ.ಕೆ.ರವಿ ಹೆಸರು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳುವ ಮೂಲಕ ಆರ್.ಆರ್.ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರನ್ನು ಮೂದಲಿಸಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಾಜ್ಯದ ಕಾಂಗ್ರೆಸ್ ನಾಯಕಿಯರು ಕೂಡ ಒಕ್ಕೊರಲಿನಿಂದ ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ.ಕೆ.ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು ಇವರು ಯಾರು. ಇಷ್ಟಕ್ಕೂ ಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ಹೆಣ್ಣಿನ ನೋವಿನ ಅರಿವಿಲ್ಲ ಎಂದರು.

ಶೋಭಾ ಕರಂದ್ಲಾಜೆ ಅವರಿಗೆ ತಮ್ಮ ತಂದೆ ನೋವಿನ ಬಗ್ಗೆ ಅರಿವಿರಬಹುದು. ಆದರೆ ಗಂಡನನ್ನು ಕಳೆದುಕೊಂಡ ಹೆಣ್ಣಿನ ಏಕಾಂಗಿತನ, ಅವರ ನೋವು ಇವರಿಗೆ ಅರ್ಥವಾಗುವುದಿಲ್ಲ ಎಂದು ಟೀಕಿಸಿದರು.

ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಮಾತನಾಡಿ, ಶೋಭಾ ಬಹಳ ದಿನಗಳ ನಂತರ ಮಾತನಾಡಿದ್ದಾರೆ. ಇಡೀ ದೇಶದಲ್ಲಿ ಹತ್ರಾಸ್ ಅತ್ಯಾಚಾರದ ವಿಚಾರದಲ್ಲಿ ಮಾತನಾಡಲಾಗುತ್ತಿದೆ. ಆದರೆ ಸಂದರ್ಭದಲ್ಲಿ ಶೋಭಾ ಅವರಿಗೆ ಈ ವಿಷಯದಲ್ಲಿ ಮಾತನಾಡಲು ಸಮಯವಿಲ್ಲ. ಅತ್ಯಾಚಾರ ಮಾಡುವವರ ಪುರುಷತ್ವ ಹರಣ ಮಾಡಬೇಕು ಎನ್ನುತ್ತಿದ್ದ ಶೋಭಾ ಕರಂದ್ಲಾಜೆ ಅವರ ಆಕ್ರೋಶ ಎಲ್ಲಿ ಮಾಯವಾಗಿದೆ ಎಂದು ಖಾರವಾಗಿ ಪ್ರಶ್ನಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group