ವರದಿಗಾರ (ಅ.13) ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ತನಿಖೆಯ ವಿಯಷವನ್ನು ಮುಂದಿಟ್ಟು “ಕೆಲವು ಮಾಧ್ಯಮಗಳ ಬೇಜವಾಬ್ದಾರಿಯುತ ವರದಿ” ಮಾಡಿವೆ ಎಂದು ಆರೋಪಿಸಿ ಬಾಲಿವುಡ್ನ ಪ್ರಮುಖ ಚಲನಚಿತ್ರ ನಿರ್ಮಾಪಕರು, ನಟರು ದೆಹಲಿ ಹೈಕೋರ್ಟ್ನಲ್ಲಿ ಕೆಲವು ಮಾಧ್ಯಮಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.
ಅಮೀರ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವ್ಗನ್, ಕರಣ್ ಜೋಹರ್, ಆದಿತ್ಯ ಚೋಪ್ರಾ ಮತ್ತು ಫರ್ಹಾನ್ ಅಖ್ತರ್ ಸೇರಿದಂತೆ ಪ್ರಮುಖ ನಾಯಕ ನಟರು, ನಿರ್ದೇಶಕರು ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
‘ರಿಪಬ್ಲಿಕ್ ಟಿವಿ’ಮತ್ತು ‘ಟೈಮ್ಸ್ ನೌ’ವಾಹಿನಿಗಳು ಬೇಜವಾಬ್ದಾರಿ, ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ಪ್ರಸಾರ ಮಾಡುತ್ತಿವೆ. ಇದಕ್ಕೆ ತಡೆ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಆಗ್ರಹಿಸಿದ್ದಾರೆ.
‘ರಿಪಬ್ಲಿಕ್ ಟಿವಿ’, ಅದರ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ, ವರದಿಗಾರ ಪ್ರದೀಪ್ ಭಂಡಾರಿ, ‘ಟೈಮ್ಸ್ ನೌ, ಅದರ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, ಗ್ರೂಪ್ ಎಡಿಟರ್ ನವಿಕಾ ಕುಮಾರ್ ಹಾಗೂ ಅಪರಿಚಿತ ಆರೋಪಿಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬಾಲಿವುಡ್ನವರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸುವುದು, ಪ್ರಸಾರ ಮಾಡುವುದಕ್ಕೆ ತಡೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿಲಾಗಿದೆ.
