ವರದಿಗಾರ (ಅ.15) ಡಿ.ಜೆ.ಹಳ್ಳಿ ಘಟನೆಯಲ್ಲಿ ಕಾಂಗ್ರೆಸ್ ತಮ್ಮದೇ ಶಾಸಕರ ಮನೆಗೆ ಬೆಂಕಿ ಇಟ್ಟಿದೆ. ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ನಾಯಕರು ಯಾವ ಮುಖ ಇಟ್ಟುಕೊಂಡು ಉಪ ಚುನಾವಣೆಯಲ್ಲಿ ಮತ ಕೇಳುತ್ತಾರೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಳೆಯಿಂದ ಜನರು ಮನೆಮಠ ಕಳೆದುಕೊಂಡಿದ್ದಾರೆ. ಕೊರೋನಾ ಸಂಕಷ್ಟವನ್ನು ಜನರು ಎದುರಿಸುತ್ತಿದ್ದಾರೆ. ಸರ್ಕಾರ ಕೊರೋನಾ ಎದುರಿಸುವಲ್ಲಿ ವಿಫಲವಾಗಿದೆ ಎಂದು ಅವರು ಬೆಂಗಳೂರಿನಲ್ಲಿಂದು ದೂರಿದರು.
2008 ರಲ್ಲಿ ಆರ್.ಆರ್.ನಗರ ಕ್ಷೇತ್ರ ರಚನೆಯಾಗಿತ್ತು. ಈವರೆಗೆ ಬಿಜೆಪಿ ಒಂದು ಬಾರಿ ಕಾಂಗ್ರೆಸ್ ಎರಡು ಬಾರಿ ಇಲ್ಲಿ ಗೆಲುವು ಸಾಧಿಸಿದೆ ನಾಮಪತ್ರ ಸಲ್ಲಿಸಿದ ಬಳಿಕ ಇದೀಗ ಅಧಿಕೃತ ಚುನಾವಣೆ ಪ್ರಚಾರ ಆರಂಭವಾಗಿದೆ. ನನ್ನನ್ನು ಇಲ್ಲಿಯವರೆಗೆ ಬೆಳೆಸಿದ್ದು ಪಕ್ಷದ ಕಾರ್ಯಕರ್ತರು. ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯನ್ನು ತಾವೇ ವಹಿಸಿಕೊಂಡಿದ್ದು ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ ಎಂದರು.
