ವರದಿಗಾರ (ಅ.15): ರಾಜ್ಯದ ಎಲ್ಲಾ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಕ್ಟೋಬರ್ 8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜೊತೆಗೆ, ರೊಟೇಷನ್ ಪದ್ದತಿ ಅನುಸಾರ ಕರಡು ಮೀಸಲು ನಿಗದಿಪಡಿಸಲು ನ್ಯಾಯಪೀಠ, ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಹಾಗೂ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿ ರಚಿಸಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ಪೀಠ, ಅ..22ರೊಳಗೆ ಕರಡು ಪ್ರತಿ ಸಲ್ಲಿಸುವಂತೆ ಸೂಚಿಸಿದೆ.
ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ಆದೇಶ ಪ್ರಶ್ನಿಸಿ ಎಚ್.ವಿ. ಚಂದ್ರೇಗೌಡ ಸೇರಿ 21 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.
