ವರದಿಗಾರ (ಅ.16) ದಲಿತ ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಉತ್ರಪ್ರದೇಶದ ಬಾರಾಬಂಕಿಯ ಸಾತ್ರಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಯುವತಿ ಜಮೀನಿಗೆ ಹೋಗಿದ್ದಳು. ಆದರೆ ತಿರುಗಿ ಬಂದಿರಲಿಲ್ಲ. ಆಕೆಯ ತಂದೆ ಹೋಗಿ ಪರಿಶೀಲಿಸಿದಾಗ ಗದ್ದೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಶಯದ ಮೇರೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಕೆಗೆ 17 ವರ್ಷ ಎಂದು ಪೋಷಕರು ತಿಳಿಸಿದ್ದಾರೆ. ಆದರೆ ಅವರು ನೀಡಿದ ದೂರಿನಲ್ಲಿ 18 ವರ್ಷ ಎಂದು ತಿಳಿಸಿದ್ದಾರೆ
ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ. ಘಟನೆ ನಡೆದಿರುವುದನ್ನು ದೃಢಪಡಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಎಸ್. ಗೌತಮ್, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
