ರಾಜ್ಯ ಸುದ್ದಿ

ಕುಸುಮಾ ವಿರುದ್ಧದ ದೂರು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ

ವರದಿಗಾರ (ಅ.16) ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ದಾಖಲಿಸಲಾಗಿರುವ ದೂರು ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆ ಎದುರು ಕೆಪಿಸಿಸಿ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾ ನಿಯಮ ಉಲ್ಲಂಘಿಸಿದ ಆರೋಪದಡಿ ಕುಸುಮಾ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು.
ಶುಕ್ರವಾರ‌ ಠಾಣೆಯ ಎದುರು ನಾಮಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತೆಯರು, ಬೇಕೆ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಡಿಸಿಪಿ ಅವರಿಗೆ ಕಾಂಗ್ರೆಸ್‌ ಶಾಸಕಿಯರಾದ ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವೆ ಉಮಾಶ್ರೀ ಅವರು ಮನವಿ ಸಲ್ಲಿಸಿದರು.

ಯಾರದ್ದೋ ಒತ್ತಡಕ್ಕೆ ಒಳಗಾಗಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೂರು ದಾಖಲಿಸಿದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು. ಅಲ್ಲಿಯವರೆಗೂ ತಾವು ಹೋರಾಟದಿಂದ ಹಿಂದಕ್ಕೆ ಸರಿಯುವುದಿಲ್ಲ. ಇಲ್ಲಿ ನ್ಯಾಯ ದೊರಕದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ. ದೂರು ವಾಪಸ್ಸು ಪಡೆಯುವವರೆಗೂ ತಾವು ಸ್ಥಳದಿಂದ ಕದಲುವುದಿಲ್ಲ ಎಂದು ಪ್ರತಿಭಟನೆಕಾರರು ಪಟ್ಟುಹಿಡಿದು ಠಾಣೆ ಮುಂದೆ ಕುಳಿತರು.

ಮಹಿಳೆಯರು ರಾಜಕೀಯ ಪ್ರವೇಶಿಸುವುದು ಅತಿವಿರಳ. ನಮ್ಮ ಅಭ್ಯರ್ಥಿ ಕುಸುಮಾ‌ ವಿರುದ್ಧ ದೂರು ದಾಖಲಿಸಿರುವುದು ಸರಿಯಲ್ಲ. ಇಲ್ಲಿನ ಠಾಣಾಧಿಕಾರಿ ಆರ್‌ಎಸ್‌ಎಸ್‌ ಪರ ಇದ್ದು, ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಠಾಣೆಯಿಂದ ಅಮಾನತು ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group