ವರದಿಗಾರ (ಅ.16) ಉತ್ತರ ಪ್ರದೇಶದ ಕೃಷ್ಣ ಜನ್ಮಭೂಮಿಗೆ ಹೊಂದಿಕೊಂಡಿರುವ ಮಸೀದಿಯೊಂದನ್ನು ತೆರವುಗೊಳಿಸಬೆಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಮಥುರಾ ನ್ಯಾಯಾಲಯವೊಂದು ವಿಚಾರಣೆಗೆ ಅಂಗೀಕರಿಸಿದೆ.
ಕೃಷ್ಣ ಜನ್ಮಭೂಮಿಯಲ್ಲಿ ಮಸೀದಿ ನಿರ್ಮಿಸಲಾಗಿದೆ, ಅದನ್ನು ತೆರವುಗೊಳಿಸಬೇಕು ಎಂದು ಕೋರಿ ಕಳೆದ ತಿಂಗಳು, ಸಲ್ಲಿಸಿದ್ದ ಅರ್ಜಿಯನ್ನು ಮಥುರಾ ಸಿವಿಲ್ ನ್ಯಾಯಾಲಯ ವಜಾಗೊಳಿಸಿತ್ತು.
ಆದರೆ ಶುಕ್ರವಾರ ಜಿಲ್ಲಾ ನ್ಯಾಯಾಧೀಶ ಸಧ್ನಾ ರಾಣಿ ಠಾಕೂರ್ ಅವರು ಅರ್ಜಿಯನ್ನು ಸ್ವೀಕರಿಸಿದರು. ನವೆಂಬರ್ 18ರಂದು ಅರ್ಜಿಯ ವಿಚಾರಣೆ ನಡೆಯಲಿದೆ. 17 ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕೃಷ್ಣದ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
