ವರದಿಗಾರ (ಅ.16) ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ -ನೀಟ್ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಒಡಿಸ್ಸಾದ ರೋರ್ಕೆರಾ ನಿವಾಸಿ ಶುಹೈಬ್ ಅಫ್ತಾಬ್ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಅಫ್ತಾಬ್ 720 ಅಂಕಗಳಲ್ಲಿ 720 ಅಂಕಗಳನ್ನು ಪಡೆದು ಶೇಕಡಾ 100 ಫಲಿತಾಂಶ ಪಡೆದು ದಾಖಲೆ ನಿರ್ಮಿಸಿದ್ದಾರೆ.
ನವದೆಹಲಿಯ ಏಮ್ಸ್ ನಲ್ಲಿ ಪ್ರವೇಶ ಪಡೆಯುವ ಇಚ್ಛೆಯನ್ನು ಶುಹೈಬ್ ವ್ಯಕ್ತಪಡಿಸಿದ್ದಾರೆ.
ಬಡ ಕುಟುಂಬದಿಂದ ಬಂದ ಶುಹೈಬ್ ಅವರ ತಂದೆ ಟೀ ಮಾರುತ್ತಿದ್ದಾರೆ.
7.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಪರೀಕ್ಷೆಯಲ್ಲಿ ತ್ರಿಪುರದಿಂದ ಅತ್ಯಧಿಕ ಅಭ್ಯರ್ಥಿಗಳು ಪಾಸಾಗಿದ್ದಾರೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದ ಅಭ್ಯರ್ಥಿಗಳು ಇದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೇಳಿದೆ.
