ರಾಷ್ಟ್ರೀಯ ಸುದ್ದಿ

ಹತ್ರಾಸ್ ಗೆ ತೆರಳುತ್ತಿದ್ದಾಗ ಬಂಧನಕ್ಕೊಳಗಾದ ನಾಲ್ವರ ವಿರುದ್ಧ ದೇಶದ್ರೋಹ ಸೇರಿ ಕಠಿಣ ಕಾನೂನುಗಳಡಿ ಪ್ರಕರಣ ದಾಖಲು

ವರದಿಗಾರ (ಅ.17) ಹತ್ರಾಸ್ ಸಂತ್ರಸ್ತರನ್ನು ಭೇಟಿಯಾಗಲು ತೆರಳುತ್ತಿದ್ದ ಕೇರಳದ ಪತ್ರಕರ್ತ ಮತ್ತು ಸಿಎಫ್ಐನ ಮೂವರು ಕಾರ್ಯಕರ್ತರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಬಳಿಕ ಇದೀಗ ಹತ್ರಾಸ್ ಪೊಲೀಸರು, ದೇಶದ್ರೋಹ ಮತ್ತು ಇತರ ಕಠಿಣ ಕಾನೂನುಗಳಡಿ ಪ್ರಕರಣ ದಾಖಲಿಸಿದ್ದಾರೆ.

ಹತ್ರಾಸ್ ಪ್ರಕರಣವನ್ನು ಮುಂದಿಟ್ಟು ಜಾತಿ ಸಂಘರ್ಷ ಮತ್ತು ಗಲಭೆಗಳನ್ನು ಪ್ರಚೋದಿಸಲು, ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಸಂಚು ರೂಪಿಸಿದ ಆರೋಪದಲ್ಲಿ ಅಕ್ಟೋಬರ್ 4 ರಂದು ಹತ್ರಾಸ್‌ನ ಚಂದ್ಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಥುರಾದಿಂದ ಬಂಧಿಸಲಾಗಿರುವ ಪತ್ರಕರ್ತ ಸಿದ್ದೀಕ್ ಕಪ್ಪನ್ (41), ಸಿಎಫ್ ಐ ಸದಸ್ಯರಾದ ಅತೀಕುರ್ರಹ್ಮಾನ್ (25), ಮಸೂದ್ ಅಹ್ಮದ್ (26), ಆಲಂ (26) ಪ್ರಸ್ತುತ ಮಥುರಾ ಜೈಲಿನಲ್ಲಿದ್ದಾರೆ. ಎಲ್ಲಾ ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸ್ಥಳೀಯ ನ್ಯಾಯಾಲಯವೊಂದು ವಾರಂಟ್ ಹೊರಡಿಸಿದೆ ಎಂದು ಹತ್ರಾಸ್ ಎಸ್ ಪಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.

ಈ ಮಧ್ಯೆ, 2019 ರ ಡಿಸೆಂಬರ್‌ನಲ್ಲಿ ಜಿಲ್ಲೆಯ ಕೊತ್ವಾಲಿ ಪ್ರದೇಶದಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಪ್ರಕರಣದಲ್ಲಿ ಮುಜಾಫರ್‌ನಗರ ಪೊಲೀಸರು ಅತೀಕುರಹ್ಮಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಹಮಾನ್ ಅವರು ಮುಜಫ್ಫರ್ ನಗರ ನಿವಾಸಿಯಾಗಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group