ರಾಷ್ಟ್ರೀಯ ಸುದ್ದಿ

ಕೋಮು ಪ್ರಚೋದನೆ: ನಟಿ ಕಂಗನಾ ರಾಣಾವತ್, ಸೋದರಿ ರಂಗೋಲಿ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಸೂಚನೆ

ವರದಿಗಾರ (ಅ.17) ಟ್ವೀಟ್ ಮತ್ತು ಸಂದರ್ಶನಗಳ ಮೂಲಕ ಕೋಮು ಉದ್ವಿಗ್ನತೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಾಂದ್ರಾದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ವಿನ್ಯಾಸಕ ಹಾಗೂ ಫಿಟ್ನೆಸ್ ತರಬೇತುದಾರ ಮುನವ್ವರಲಿ ಸಯ್ಯದ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆ ಈ ಆದೇಶವನ್ನು ನೀಡಿದ್ದಾರೆ.

ಪ್ಯಾರಿಸ್ ನಲ್ಲಿ ಧರ್ಮದ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ಶಿರಚ್ಛೇದ ಮಾಡಲ್ಪಟ್ಟ ಘಟನೆಗೆ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಕಂಗನಾ ರಾಣಾವತ್, “ಹಿಂದೂಗಳ ಜೀವನವು ಅಪ್ರಸ್ತುತವಾಗುತ್ತಿದೆ, ಪಾಶ್ಚಾತ್ಯರು ಇದುವರೆಗೆ 5-6 ಮಿಲಿಯನ್ ಯಹೂದಿಗಳ ನರಮೇಧದ ಬಗ್ಗೆ ಚಲನಚಿತ್ರಗಳನ್ನು ಮಾಡುತ್ತಿದ್ದಾರೆ, ನೂರಾರು ವರ್ಷಗಳ ಗುಲಾಮಗಿರಿಯ ಮೂಲಕ ಎಷ್ಟು ಹಿಂದೂಗಳನ್ನು ಕೊಲ್ಲಲಾಯಿತು ಎಂದು ನಮಗೆ ತಿಳಿದಿದೆಯೇ? ಯಹೂದಿಗಳಿಗಿಂತ 100 ಪಟ್ಟು ಹೆಚ್ಚು ಹಿಂದೂಗಳನ್ನು ಹತ್ಯೆ ಮಾಡಲಾಗಿದೆ, ಆದರೆ ಹಿಂದೂ ನರಮೇಧದ ಬಗ್ಗೆ ಯಾವುದೇ ಚಲನಚಿತ್ರಗಳು ಬರುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಐಪಿಎಲ್ ಸೆಕ್ಷನ್ 153 ಎ( ವಿವಿಧ ಗುಂಪುಗಳ ನಡುವೆ ಶತ್ರುತ್ವಕ್ಕೆ ಪ್ರಚೋದನೆ) 295 ಎ( ಧರ್ಮವನ್ನು ಅಪಮಾನಿಸುವ ಮೂಲಕ ಕೋಮು ಭಾವನೆ ಕೆರಳಿಸುವ ಚಟುವಟಿಕೆ) ಮತ್ತು 124ಎ ಅನ್ವಯ ದೇಶದ್ರೋಹದ ಆಧಾರದ ಮೇಲೆ ಪ್ರಕರಣ ದಾಖಲಿಸಬೇಕೆಂದು ಸಯ್ಯದ್ ದೂರಿನಲ್ಲಿ ಮನವಿ ಮಾಡಿದ್ದರು.

ಸುಶಾಂತ್ ಸಿಂಗ್ ರಜಪೂತ್ ಕೇಸ್ ಹಾಗೂ ಮುಂಬೈಯನ್ನು ಪಾಕ್ ಎಂದು ಕರೆದು ರಾಣಾವತ್ ಮಾಡಿದ್ದ ಟ್ವೀಟ್ ಗಳನ್ನು ನ್ಯಾಯಾಧೀಶರು ಉಲ್ಲೇಖಿಸಿದರು. ಇದು ರಾಣಾವತ್ ವಿರುದ್ಧದ ಎರಡನೇ ಎಫ್ ಐಆರ್ ಆಗಿದೆ. ಇದಕ್ಕೂ ಮೊದಲು ರೈತರನ್ನು ಭಯೋತ್ಪಾದಕರು ಎಂದು ಕರೆದ ಹಿನ್ನೆಲೆಯಲ್ಲಿ ತುಮಕೂರು ನ್ಯಾಯಾಲಯ ಎಫ್ ಐಆರ್ ದಾಖಲಿಸಲು ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group