ರಾಜ್ಯ ಸುದ್ದಿ

ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ; ಡಿಕೆಶಿ ಕಿಡಿ

ವರದಿಗಾರ (ಅ.17) ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಮೂರನೇ ಭಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ ಡೌನ್ ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಮಳೆರಾಯನ ರೌದ್ರನರ್ತನ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳಲ್ಲಿ ಜನಜೀವನವನ್ನು ಮೂರಾಬಟ್ಟೆ ಮಾಡಿದೆ. ಆದರೂ ಈ ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ. ಪ್ರವಾಹದಿಂದಾಗಿ ಅನೇಕರು ಮನೆಗಳನ್ನು ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಅಗತ್ಯ ಮೂಲಭೂತ ಸೌಕರ್ಯಗಳ ಮರುಸ್ಥಾಪನೆಗಾಗಿ, ಪ್ರವಾಹ ಪೀಡಿತ ಪ್ರತಿ ತಾಲೂಕಿಗೆ ಸರ್ಕಾರವು ಈ ಕೂಡಲೇ ಕನಿಷ್ಠ 1 ಕೋಟಿ ರೂ. ಅನುದಾನ ಸರ್ಕಾರ ಈ ಕೂಡಲೇ ನೀಡಬೇಕು ಮನೆಗಳಿಗೆ ನೀರು ನುಗ್ಗಿ ಜನರು ಶೇಖರಿಸಿಟ್ಟಿದ್ದ ದವಸ-ಧಾನ್ಯಗಳೂ ನೀರು ಪಾಲಾಗಿವೆ. ಇಂತಹ ಕುಟುಂಬಗಳಿಗೆ 5,000 ರೂ. ತುರ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮನೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ, ಮನೆ ಕಳೆದುಕೊಂಡವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು.ಹಾನಿ ಸಮೀಕ್ಷೆ ನಡೆಸಿ, ವಾರದೊಳಗಡೆ ಬೆಳೆ ಪರಿಹಾರವನ್ನು ರೈತರಿಗೆ ನೀಡಬೇಕು, ಕೊರೋನಾ ಸಾಂಕ್ರಾಮಿಕ ರಾಜ್ಯದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದರ ನಡುವೆಯೇ ನೆರೆ ಪರಿಸ್ಥಿತಿ ಉಲ್ಬಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group