ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ

ವರದಿಗಾರ (ಅ.17) ವ್ಯಕ್ತಿಯೊಬ್ಬ ತನ್ನ ಕಾರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ.

ಬಾಲಕಿ ಮನೆಗೆ ಸಾಮಗ್ರಿ ಖರೀದಿಸಲು ಮಾರ್ಕೆಟ್ ಗೆ ಹೋಗುವಾಗ ಕಾರು ಚಾಲಕ ಬಾಲಕಿಯನ್ನು ಡ್ರಾಪ್ ಕೊಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಎಫ್ ಐಆರ್ ದಾಖಲಾಗಿದೆ.

ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ ಆರೋಪಿ ಪರಾರಿಯಾಗಿದ್ದಾನೆ. ಅದೇ ದಾರಿಯಲ್ಲಿ ಬರುತ್ತಿದ್ದ ಸಾರ್ವಜನಿಕರು ಬಾಲಕಿಯನ್ನು ಕಂಡು ಆಕೆಯ ಮನೆಗೆ ಕರೆ ತಂದು ಬಿಟ್ಟಿದ್ದಾರೆ. ಮನೆಗೆ ಬಂದಾಗ ಬಾಲಕಿ ವಿಷಯವನ್ನು ತಂದೆಗೆ ತಿಳಿಸಿದ್ದಾರೆ.

ಆರೋಪಿ ಬಾಲಕಿಯ ಮನೆಗೆ ಆಗಾಗ್ಗೆ ಬರುತ್ತಿದ್ದು, ಕುಟುಂಬಕ್ಕೆ ಆತನ ಪರಿಚಯವಿದೆ ಎಂದು ಮೀರತ್ ನಗರ ಎಸ್.ಪಿ.ಅಖಿಲೇಶ್ ನಾರಾಯಿಣ್ ಸಿಂಗ್ ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group