ರಾಜ್ಯ ಸುದ್ದಿ

ಪ್ರವಾಹಪೀಡಿತ ಪ್ರದೇಶ ವೀಕ್ಷಣೆಗೆ ಬಂದಿದ್ದ ಬಿಜೆಪಿ ಸಂಸದ ಉಮೇಶ್ ಜಾಧವ್ ಗೆ ಗ್ರಾಮಸ್ಥರ ಘೇರಾವ್

ವರದಿಗಾರ (ಅ.19) ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡಲು ಬಂದಿದ್ದ ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಗ್ರಾಮಸ್ಥರು ಘೇರಾವ್ ಹಾಕಿ ವಾಪಸ್ ಕಳುಹಿಸಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುತ್ಗಾ ಗ್ರಾಮದಲ್ಲಿ ನಡೆದಿದೆ.

ಪ್ರವಾಹ ಸಂತ್ರಸ್ತ ಪ್ರದೇಶಗಳ ವೀಕ್ಷಣೆಗಾಗಿ ಸಂಸದ ಉಮೇಶ್ ಜಾಧವ್ ತೆರಳಿದ್ದರು. ಪ್ರವಾಹ ಬಂದು ನಾಲ್ಕೈದು ದಿನಗಳು ಕಳೆದರೂ ಜಿಲ್ಲೆಗೆ ಸಂಸದರು ಆಗಮಿಸದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಮನವೊಲಿಸುವ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಸಂಸದ ಜಾಧವ್ ಅಲ್ಲಿಂದ ನಿರ್ಗಮಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group