Uncategorized

ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್‌ಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು: ಕುಮಾರಸ್ವಾಮಿ

HD Kumaraswamy

ವರದಿಗಾರ (ಅ.19) ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್‌ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು , ಕನಿಷ್ಠ ಪಕ್ಷ ಕೊರೊನ ವಾರಿಯರ್‌ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ಕೇವಲ ಬಾಯಿ ಚಪಲ ತೀರಿಸಿಕೊಳ್ಳಲು ಕೊರೊನ ವಾರಿಯರ್‌ಗಳನ್ನು ಭೇಷ್ ಎನ್ನುವ ಸರ್ಕಾರ, ಅವರ ಜೀವದ ಜತೆ ಆಟವಾಡುತ್ತಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ತಮ್ಮ ಸರ್ವಸ್ವವನ್ನೇ ಬಲಿಕೊಟ್ಟ ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು? ಎಂದು ಕುಟುಕಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group