ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಗಾಯಕಿಯ ಮೇಲೆ ಶಾಸಕ, ಪುತ್ರನಿಂದ ಅತ್ಯಾಚಾರ

ವರದಿಗಾರ (ಅ.19) ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷ ನಿಶಾದ್ ಪಾರ್ಟಿಯ ಶಾಸಕ ವಿಜಯ್ ಮಿಶ್ರಾ ಮತ್ತು ಆತನ ಮಗ ಸೇರಿದಂತೆ ಮೂವರು 25 ವರ್ಷ ಪ್ರಾಯದ ಗಾಯಕಿಯೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು. ಭಾನುವಾರ ಈ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

2014ರಲ್ಲಿ ಶಾಸಕ ವಿಜಯ್ ಮಿಶ್ರಾ, 25 ವರ್ಷದ ಗಾಯಕಿಯನ್ನು ಕಾರ್ಯಕ್ರಮ ನಡೆಸಿಕೊಡಲು ತಮ್ಮ ಮನೆಗೆ ಕರೆಸಿಕೊಂಡಿದ್ದಾನೆ. ಆ ಸಂದರ್ಭದಲ್ಲಿ ವಿಜಯ್ ಮಿಶ್ರಾ ಹಾಗೂ ಅವರ ಪುತ್ರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ಹೊರಗಡೆ ತಿಳಿಸಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಗಾಯಕಿ ಆರೋಪಿಸಿದ್ದಾರೆ ಎಂದು ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಬದನ್ ಸಿಂಗ್ ತಿಳಿಸಿದ್ದಾರೆ.

2015ರಲ್ಲಿ ವಾರಾಣಸಿಯ ಹೋಟೆಲೊಂದರಲ್ಲಿಯೂ ಅತ್ಯಾಚಾರವೆಸಗಲಾಗಿದೆ ಎಂದೂ ಗಾಯಕಿ ದೂರಿನಲ್ಲಿ ತಿಳಿಸಿದ್ದಾರೆ.
ತನ್ನ ಮೇಲೆ ಅತ್ಯಾಚಾರವೆಸಗಿದ ಬಳಿಕ ತನ್ನನ್ನು ಮನೆಗೆ ಬಿಟ್ಟು ಬರಲು ಮಿಶ್ರಾ ತನ್ನ ಪುತ್ರ ಹಾಗೂ ಸೋದರಳಿಯನಿಗೆ ಸೂಚಿಸಿದ್ದ, ಆದರೆ, ಅವರೂ ಕೂಡ ತನ್ನ ಮೇಲೆ ಅತ್ಯಾಚಾರವೆಸಗಿದ ಬಳಿಕ ಮನೆಗೆ ತಲುಪಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾರೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ವಿಜಯ್ ಮಿಶ್ರಾ ವಿರುದ್ಧ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ಭೂ ಕಬಳಿಕೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಆತ ಪ್ರಸ್ತುತ ಜೈಲಿನಲ್ಲಿದ್ದಾನೆ.

ಸಂತ್ರಸ್ತೆ ಗಾಯಕಿ ಗೋಪಿಗಂಜ್ ಪೊಲೀಸ್ ಠಾಣೆಯಲ್ಲಿ ಶಾಸಕನ ವಿರುದ್ಧ ದೂರು ದಾಖಲಿಸಿದ್ದಾರೆ. ‘ವಿಜಯ್ ಮಿಶ್ರಾ ಬಳಿ ನನಗೆ ಸಂಬಂಧಿಸಿದ ವಿಡಿಯೋ ಕ್ಲಿಪ್ ಇದೆ ಎಂದು ಹೇಳಿದ್ದಾರೆ. ಆರೋಪಿ ಶಾಸಕನಾಗಿದ್ದು, ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಕಾರಣ ಆತನ ವಿರುದ್ದ ದೂರು ನೀಡಲು ಹೆದರಿದ್ದೆ ಎಂದು ಹೇಳಿದ್ದಾರೆ. ಮೂರು ವಾರಗಳ ಹಿಂದೆ ಮಿಶ್ರಾ ಅವರನ್ನು ಚಿತ್ರಕೂಟ್ ಜೈಲಿನಿಂದ ಆಗ್ರಾ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group