ರಾಷ್ಟ್ರೀಯ ಸುದ್ದಿ

ಪೌರತ್ವ ತಿದ್ದುಪಡಿ ಕಾಯ್ದೆ-ಸಿಎಎ ಶೀಘ್ರ ಜಾರಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ವರದಿಗಾರ (ಅ.19) ಪೌರತ್ವ ತಿದ್ದುಪಡಿ ಕಾಯ್ದೆ-ಸಿಎಎಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸಿಎಎ ಶೀಘ್ರ ಜಾರಿಗೊಳ್ಳಲಿದೆ, ಕೋವಿಡ್ -19 ನಿಂದಾಗಿ ಅಲ್ಪ ವಿಳಂಬವಾಗಿದೆಯಷ್ಟೇ ಎಂದು ಅವರು ಹೇಳಿದ್ದಾರೆ.
ಸೋಮವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಎ ಜಾರಿಗೆ ಪಕ್ಷ ಬದ್ಧವಾಗಿದೆ. ಎಲ್ಲರಿಗೂ ಅದರ ಪ್ರಯೋಜನ ಸಿಗಲಿದೆ ಎಂದರು.

ಸಿಎಎ ನಿಯಮಗಳನ್ನು ರೂಪಿಸಲು ಇನ್ನೂ ಮೂರು ತಿಂಗಳುಗಳು ಬೇಕಾಗುತ್ತವೆ ಎಂದು ಗೃಹ ಸಚಿವಾಲಯವು ಆಗಸ್ಟ್ ನಲ್ಲಿ ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿತ್ತು. ಸಂಸತ್ತು ಅಂಗೀಕರಿಸಿದ ನಂತರ ಅಧಿಸೂಚನೆ ಹೊರಡಿಸಿದರೂ, ನಿಯಮಗಳ ಕೊರತೆಯಿಂದಾಗಿ ಸಿಎಎ ಅನುಷ್ಠಾನವನ್ನು ತಡೆಹಿಡಿಯಲಾಗಿದೆ.

ಕಳೆದ ವರ್ಷ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ, 2014ರ ಡಿಸೆಂಬರ್ 14ಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬಂದಿರುವ ಮುಸ್ಲಿಮೇತರ ಹಿಂದೂ, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧ, ಜೈನರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವ ಒದಗಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಹೊರಗೆ ಇಡಲಾಗಿದೆ. ಇದು ತಾರತಮ್ಯದ ಕಾಯ್ದೆ ಎಂದು ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು. ಆದರೆ ಕೋವಿಡ್ ಕಾಣಿಸಿಕೊಂಡ ಬಳಿಕ ಪ್ರತಿಭಟನೆ ಸ್ಥಗಿತಗೊಂಡಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group