ರಾಷ್ಟ್ರೀಯ ಸುದ್ದಿ

ಟಿ ಆರ್ ಪಿ ಹಗರಣ: ಅರ್ನಾಬ್ ಗೋಸ್ವಾಮಿಗೆ ಸಮನ್ಸ್ ಜಾರಿಗೊಳಿಸಲು ಬಾಂಬೆ ಹೈಕೋರ್ಟ್ ನಿರ್ದೇಶನ

ವರದಿಗಾರ (ಅ.19): ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಅಗತ್ಯವಿದ್ದರೆ ಸಮನ್ಸ್ ಜಾರಿಗೊಳಿಸುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಲೈವ್‌ಲಾ.ಇನ್ ವೆಬ್ ಸೈಟ್ ವರದಿ ಮಾಡಿದೆ. ಗೋಸ್ವಾಮಿ ಅವರ ಹೆಸರನ್ನು ಎಫ್ ಐಆರ್ ನಲ್ಲಿ ಸೇರ್ಪಡೆಗೊಳಿಸುವುದಿದ್ದರೆ ಅವರಿಗೆ ಸಮನ್ಸ್ ಜಾರಿ ಮಾಡಿ ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ.ಎಸ್. ಕಾರ್ನಿಕ್ ಅವರನ್ನೊಳಗೊಂಡ ನ್ಯಾಯಪೀಠವು ಗೋಸ್ವಾಮಿ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ನೀಡಿದ ಹೇಳಿಕೆಯನ್ನು ದಾಖಲಿಸಿದ್ದು, ಅಂತಹ ಸಮನ್ಸ್ ಬಂದರೆ ಅವರು ಹಾಜರಾಗುತ್ತಾರೆ ಮತ್ತು ತನಿಖೆಗೆ ಸಹಕರಿಸುತ್ತಾರೆ ಎಂದು ಸಾಳ್ವೆ ಭರವಸೆ ನೀಡಿದರು.

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಕಪಿಲ್ ಸಿಬಲ್ ನಡುವೆ ಮಧ್ಯಂತರ ರಕ್ಷಣೆ ನೀಡುವ ಬಗ್ಗೆ ತೀವ್ರ ವಾಗ್ಯುದ್ಧಕ್ಕೆ ಕಾರಣವಾಯಿತು.
ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಪರವಾಗಿ ಹಾಜರಾದ ಸಾಳ್ವೆ, ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ ಎಸ್ ಕಾರ್ನಿಕ್ ಅವರನ್ನೊಳಗೊಂಡ ನ್ಯಾಯಪೀಠವನ್ನು ಮಧ್ಯಂತರ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡರು.

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಕಂಡಿವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಅನ್ನು ರದ್ದುಪಡಿಸಬೇಕು ಮತ್ತು ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಬೇಕು ಎಂದು ರಿಪಬ್ಲಿಕ್ ಟಿವಿ ಮತ್ತು ಆರ್. ಭಾರತ್ ಸುದ್ದಿ ವಾಹಿನಿಗಳನ್ನು ಹೊಂದಿರುವ ಎಆರ್‌ಜಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಟಿಆರ್‌ಪಿಗಳನ್ನು ಅಳೆಯುವ ಉದ್ದೇಶದಿಂದ ಬಾರೋಮೀಟರ್‌ಗಳನ್ನು ಇರಿಸಿದ ಮನೆಗಳಿಗೆ ಹಣ ಪಾವತಿಸುವ ಮೂಲಕ ಕೆಲವು ಚಾನೆಲ್‌ಗಳ ಟಿಆರ್‌ಪಿಗಳ ವಂಚನೆ ಪ್ರಕರಣವನ್ನು ಅಪರಾಧ ವಿಭಾಗವು 2020 ರ ಅಕ್ಟೋಬರ್ 7 ರಂದು ಕಂಡಿವಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group