ರಾಜ್ಯ ಸುದ್ದಿ

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ, ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದೆ; ಬಿಜೆಪಿ ಶಾಸಕ ಯತ್ನಾಳ

ವರದಿಗಾರ (ಅ.21) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ. ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕವವರೇ ಮುಖ್ಯಮಂತ್ರಿಯಾಗಲಿದ್ದಾರೆ. ಯಡಿಯೂರಪ್ಪ ಅವರು ಅನುದಾನವನ್ನು ಬರೀ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಅವರು ಬಹಳ ದಿವಸ ಅಧಿಕಾರದಲ್ಲಿ ಇರುವುದಿಲ್ಲ.ಅವರದೂ ಬಂದೈತಿ. ಏಕೆಂದ್ರೆ ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊನ್ನೆ ಉಮೇಶ ಕತ್ತಿ ಇವರು ಶಿವಮೊಗ್ಗ ಮುಖ್ಯ ಮಂತ್ರಿಯೋ? ಕರ್ನಾಟಕದ ಮುಖ್ಯ ಮಂತ್ರಿಯೋ ಎಂದು ಹೇಳಿಕೆ ನೀಡಿದ್ದರು ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಆಮೂಲಕ ನವೆಂಬರ್, ಡಿಸೆಂಬರ್ ವೇಳೆಗೆ ಮುಖ್ಯಮಂತ್ರಿ ಬದಲಾವಣೆ ಖಚಿತವೆನ್ನುವ ಮಾಹಿತಿಯನ್ನು ಯತ್ನಾಳ್ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಚುನಾವಣೆ ಫಲಿತಾಂಶ ನೋಡಿಕೊಂಡು ಡಿಸೆಂಬರ್ ವೇಳೆಗೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಉತ್ತರ ಕರ್ನಾಟಕದವರನ್ನು ಸಿಎಂ ಮಾಡುವುದು ಬಹುತೇಕ ಖಚಿತವಾದಂತಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group