ರಾಷ್ಟ್ರೀಯ ಸುದ್ದಿ

ಹತ್ರಾಸ್ ಘಟನೆಯಿಂದ ಆಕ್ರೋಶ: ವಾಲ್ಮೀಕಿ ಸಮುದಾಯದ 236 ಮಂದಿ ಬೌದ್ಧ ಧರ್ಮಕ್ಕೆ ಮತಾಂತರ

ವರದಿಗಾರ (ಅ.21) ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಹತ್ಯೆ ಘಟನೆಯ ನಂತರದ ಸಂತ್ರಸ್ತೆಯ ಸಮುದಾಯ (ವಾಲ್ಮೀಕಿ) 50 ಕುಟುಂಬಗಳ 236 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗಾಜಿಯಾಬಾದ್‌ನ ಕಾರ್ಹೆಡಾ ಪ್ರದೇಶದಲ್ಲಿ ಅಕ್ಟೋಬರ್ 14 ರಂದು ನಡೆದಿದೆ.

ಈ ಪ್ರದೇಶದಲ್ಲಿ ವಾಸಿಸುವ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಎಲ್ಲಾ 236 ಜನರು ಬೌದ್ಧ ಧರ್ಮ ಸ್ವೀಕರಿಸಲು ನಿರ್ಧರಿಸಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮರಿ ಮೊಮ್ಮಗ ರಾಜರತ್ನ ಅವರ ಸಮ್ಮುಖದಲ್ಲಿ ಅವರು ಬೌದ್ಧಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಹಾಥರಸ್ ಘಟನೆಯಿಂದ ನಾವು ತೀವ್ರ ಬಾಧಿತರಾಗಿದ್ದೇವೆ. ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ, ಯಾವುದೇ ನಾಯಕರು, ಅಧಿಕಾರಿಗಳು ನಮ್ಮ ಸಂಕಷ್ಟವನ್ನು ಆಲಿಸಲಿಲ್ಲ ಎಂದು ಕುಟುಂಬಗಳು ಆರೋಪಿಸಿವೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ರಾಜರತ್ನ ಅಂಬೇಡ್ಕರ್, ವಾಲ್ಮೀಕಿ ವರ್ಗದ ಜನರಿಗೆ ಬೌದ್ಧ ಧರ್ಮ ಪರಿಚಯಿಸುತ್ತಿರುವುದನ್ನು ನೋಡಬಹುದು. ಅವರೆಲ್ಲರಿಗೂ ಭಾರತೀಯ ಬೌದ್ಧ ಸದಸ್ಯತ್ವ ಪ್ರಮಾಣಪತ್ರ ನೀಡಲಾಗಿದೆ.

ಬೌದ್ಧ ಧರ್ಮಕ್ಕೆ ಮತಾಂತರಗೊಂಡವರಲ್ಲಿ ಒಬ್ಬರಾದ ಬಿರ್ ಸಿಂಗ್ ಪ್ರತಿಕ್ರಿಯಿಸಿ “ ನಮ್ಮ ಗ್ರಾಮದ 50 ಕುಟುಂಬಗಳಿಗೆ ಸೇರಿದ ಮಹಿಳೆಯರು, ಮಕ್ಕಳು ಸೇರಿದಂತೆ 236 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆ. ಇದಕ್ಕೆ ಯಾವುದೇ ಶುಲ್ಕಪಡೆದಿಲ್ಲ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ನಂತರ, ಸಾಮಾಜಿಕ ಸೇವೆಯಂತಹ ಒಳ್ಳೆಯ ಕಾರ್ಯಗಳನ್ನು ಮಾಡಲು ನಮಗೆ ಬೋಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಇನ್ನೂ ಹಾಥರಸ್ ಜಿಲ್ಲೆಯ ಬುಲ್ಗಾದಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ಘಟನೆ ದೇಶಾದ್ಯಂತ ಆಕ್ರೋಶ ಹುಟ್ಟುಹಾಕಿದೆ. ಪ್ರಸ್ತುತ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ ನಾಲ್ವರು ಆರೋಪಿಗಳು ಆಲಿಗಢ ಜೈಲಿನಲ್ಲಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group